ಬಸವರಾಜ ಹೊರಟ್ಟಿ 
ರಾಜಕೀಯ

ಜೆಡಿಎಸ್ ದುಸ್ಥಿತಿಗೆ ಅಪ್ಪ ಮಗ ಇಬ್ಬರೂ ಕಾರಣ

ಕುಮಾರಸ್ವಾಮಿ ಮತ್ತು ದೇವೇಗೌಡರು ಪಕ್ಷ ಸಂಘಟನೆ ಬಗ್ಗೆ ಆಸಕ್ತಿ ಇಲ್ಲದಿದ್ದರೆ...

ಹುಬ್ಬಳ್ಳಿ: ಕುಮಾರಸ್ವಾಮಿ ಮತ್ತು ದೇವೇಗೌಡರು ಪಕ್ಷ ಸಂಘಟನೆ ಬಗ್ಗೆ ಆಸಕ್ತಿ ಇಲ್ಲದಿದ್ದರೆ ನೇರವಾಗಿ ಹೇಳಲಿ, ನಮ್ಮ ದಾರಿ ನಾವು ನೋಡಿಕೊಳ್ಳುತ್ತೇವೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೇರ ಆಗ್ರಹ ಮಾಡಿದ್ದಾರೆ.

ಕುಮಾರಸ್ವಾಮಿಯವರ ನಿಷ್ಕಾಳಜಿ ಮತ್ತು ಈಗಿನ ತಲೆಮಾರಿಗೆ ಹೊಂದಿಕೊಳ್ಳದ ದೇವೇಗೌಡರ ಮನಸ್ಥಿತಿಗಳಿಂದ ಜೆಡಿಎಸ್‌ಗೆ ದುಸ್ಥಿತಿ ಬಂದಿದೆ. ದೇವೆಗಗೌಡರದು ಜನರೇಷನ್, ಈಗಿನ ರಾಜಕೀಯ ಸ್ಥಿತಿಗೆ ಅವರು ಹೊಂದಿಕೊಳ್ಳುತ್ತಿಲ್ಲ. ಕುಮಾರಸ್ವಾಮಿ ಅವರದ ನಿಷ್ಕಾಳಜಿ. ಹೀಗಾಗಿ ಪಕ್ಷ ಸಂಘಟನೆಗೆ ಅಡ್ಡಿಯಾಗಿದೆ ಎಂದು ಇದೇ ಮೊದಲ ಸಲ ಪಕ್ಷದ ವರಿಷ್ಠರ ವಿರುದ್ಧ ಹರಿಹಾಯ್ದಿದ್ದಾರೆ.

ಹುಬ್ಬಳ್ಳಿಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಜೆಡಿಎಸ್ ಜಿಲ್ಲಾಧ್ಯಕ್ಷರು ಹಾಗೂ ಮುಖಂಡರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಹುಬ್ಬಳ್ಳಿಯಲ್ಲಿ ಮನೆ ಮಾಡಿ ಈ ಭಾಗದಲ್ಲಿ ಫಕ್ಷ ಸಂಘಟನೆ ಮಾಡುವುದಾಗಿ ಎರಡು ಬಾರಿ ಘೋಷಿಸಿದ್ದರು. ಮನೆ ಮಾಡುವುದರಿಂದ ಪಕ್ಷ ಸಂಘಟನೆಯಾಗುವುದಿಲ್ಲ.

ಉತ್ತರ ಕರ್ನಾಟಕ ಭಾಗದಲ್ಲಿ ತಿಂಗಳಲ್ಲಿ ಒಮ್ಮೆಯಾದರೂ ಓಡಾಡಲಿ. ಇವರ ನಿಷ್ಕಾಳಜಿಯಿಂದ ಪಕ್ಷ ಹಾಳಾಗುವುದರ ಜತೆಗೆ ಕಾರ್ಯಕರ್ತರು ಅನಾಥರಾಗುತ್ತಿದ್ದಾರೆ. ಉತ್ತರ ಕರ್ನಾಟಕದ ಲಿಂಗಾಯುತರು ಜೆಡಿಎಸ್‌ಗೆ ಮನ್ನಣೆ ನೀಡುವುದಿಲ್ಲ ಎನ್ನುವುದು ಕುಮಾರಸ್ವಾಮಿ ವಿಚಾರ.

ಆದರೆ, ಜೆಡಿಎಸ್‌ಗೆ ಸಾಕಷ್ಟು ಕಾಯಕರ್ತರಿದ್ದಾರೆ. ಹಾಗಂತ ಹೇಳಿದರೆ, ನಾಯಕರ ಕಣ್ಣಿಗೆ ಖಳನಾಗಿ ಕಾಣಿಸುತ್ತೇನೆ. ಆದರೆ ಇದಕ್ಕೆಲ್ಲ ಸೊಪ್ಪು ಹಾಕುವುದಿಲ್ಲ. ನನ್ನನ್ನು ನಂಬಿರುವ ಕಾರ್ಯಕರ್ತರ ಒಳಿತಿಗಾಗಿ ಮಾತನಾಡಲು ಹಿಂಜರಿಯುವುದಿಲ್ಲ ಎಂದರು.

ವಿಶ್ವಾಸಕ್ಕೆ ತೆಗದುಕೊಳ್ಳುತ್ತಿಲ್ಲ
ಅನ್ಯ ಪಕ್ಷಗಳ ಮುಖಂಡರನ್ನು ಜೆಡಿಎಸ್‌ಗೆ ಸೇರಿಸಿಕೊಳ್ಳುವಾಗಲೂ ಕೆಳ ಹಂತದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ದುಡ್ಡಿದ್ದ ವ್ಯಕ್ತಿಗೆ ಮಣೆ ಹಾಕುತ್ತಾರೆ. ನಾವು ವರ್ಷ ಪೂರ್ತಿ ಕೆಲಸ ಮಾಡವುದು, ಹೊರಗಿನಿಂದ ಬಂದ ವ್ಯಕ್ತಿಗೆ ಟಿಕೆಟ್ ನೀಡುವುದು. ಹೊರಟ್ಟಿ ಉತ್ತರ ಕರ್ನಾಟಕ ಭಾಗದ ನಾಯಕ ಎಂದು ಕಾರ್ಯಕರ್ತರು ಅಂದುಕೊಂಡಿದ್ದಾರೆ.

ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ನಾನು ಒಬ್ಬರಿಗೂ ಬಿ ಫಾರ್ಮ್ ಕೊಟ್ಟಿಲ್ಲ. ಇಂಥ ಹೆಗ್ಗಳಿಕೆ ಯಾವ ಕಾರಣಕ್ಕೆ? ಬಸನಗೌಡ ಪಾಟೀಲ ಯತ್ನಾಳ, ವಿಜುಗೌಡ ಪಾಟೀಲ ಅಂಥವರನ್ನು ಪಕ್ಷಕ್ಕೆ ಸೇರಿಸಿಕೊಂಡರು. ಇಂಥವರಿಂದ ಪಕ್ಷಕ್ಕೆ ಹೊಡೆತ ಬೀಳುತ್ತಿದೆ. ಜೆಡಿಎಸ್‌ನಿಂದ ಅನೇಕರು ಹೊರ ಹೋಗುತ್ತಿದ್ದಾರೆ. ಅವರನ್ನೆಲ್ಲ ವಿಶ್ವಾಸಕ್ಕೆ ತೆಗೆದುಕೊಂಡು ಉಳಿಸಿಕೊಳ್ಳದಿದ್ದರೆ ಜೆಡಿಎಸ್‌ಗೆ ಅಸ್ತಿತ್ವವೇ ಇಲ್ಲದಂತಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ