ರಾಜಕೀಯ

ವಾಟಾಳ್‌ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟ್ಟ?

Lingaraj Badiger

ಮೈಸೂರು: ನಿಗಮ-ಮಂಡಳಿ ನೇಮಕ ಪಟ್ಟಿಯನ್ನು ಅಂತಿಮಗೊಳಿಸಿರುವ ಕಾಂಗ್ರೆಸ್ ನಾಯಕರು, ಇದೀಗ ಮಾಜಿ ಶಾಸಕ ಹಾಗೂ ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟ್ಟ ನೀಡಲು ಮುಂದಾಗಿದೆ.

ಹಳೆ ಮೈಸೂರು ಭಾಗದ ಕಾಂಗ್ರೆಸ್ ನಾಯಕರು ಹಾಗೂ ಶಾಸಕರು ವಾಟಾಳ್ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕುತ್ತಿದ್ದು, ಇದಕ್ಕೆ ಸಮ್ಮತಿ ಸೂಚಿಸಿರುವ ಸಿಎಂ, ಪಕ್ಷದ ಹೈಕಮಾಂಡ್ ಒಪ್ಪಿಗೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಚಂದ್ರು ಅವರ ಅವಧಿ ಮುಗಿದ ನಂತರ ಹಲವು ತಿಂಗಳಿಂದ ಪ್ರಾಧಿಕಾರದ ಅಧ್ಯಕ್ಷ ಹುದ್ದೆ ಖಾಲಿ ಇದೆ. ಸಂಪುಟ ದರ್ಜೆ ಸ್ಥಾನಮಾನ ಹೊಂದಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ವಿಧಾನಸೌಧದಲ್ಲಿ ಕಚೇರಿಯನ್ನು ನೀಡಲಾಗಿದೆ.

ರಂಗಿನ ರಾಜಕಾರಣಿ ವಾಟಾಳ್ ಅವರು ಕಳೆದ ಐದು ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಅವರು ಯಾವಾಗಲೂ ಕನ್ನಡ ಪರ ಹೋರಾಟ ನಡೆಸುತ್ತಾ ಬಂದಿದ್ದಾರೆ.

SCROLL FOR NEXT