ಪ್ರಧಾನಿಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಪುಷ್ಪಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. 
ರಾಜಕೀಯ

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳೊಂದಿಗೆ ಮೋದಿ ಸಂವಾದ

ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಆಗಮಿಸಿದ್ದು, ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಆಗಮಿಸಿದ್ದು, ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.

ಪಕ್ಷ ಹಾಗೂ ಕೇಂದ್ರ ಸರ್ಕಾರದ ನಡುವಿನ ಸಮನ್ವಯತೆ ಮತ್ತು ಪಕ್ಷ ಬಲವರ್ಧನೆ ಕುರಿತು ಪದಾಧಿಕಾರಿಗಳೊಂದಿಗೆ ಪ್ರಧಾನಿ ಚರ್ಚಿಸುತ್ತಿದ್ದಾರೆ.

ಇಂದು ಮಧ್ಯಾಹ್ನ 3.30ರ ಸುಮಾರಿಗೆ ವಿಶೇಷ ವಿಮಾನದ ಮೂಲಕ ನಗರದ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.

ಮೋದಿ ಎಚ್‌ಎಎಲ್ ಏರ್‌ಪೋರ್ಟ್‌ನಿಂದ ನೇರವಾಗಿ ರಾಜಭವನಕ್ಕೆ ತೆರಳಿ, ಅಲ್ಲಿಂದ ಪಕ್ಷದ ಕಾರ್ಯಕಾರಣಿ ಸಭೆ ನಡೆಯುತ್ತಿರುವ ಅಶೋಕ ಹೋಟೆಲ್‌ಗೆ ಆಗಮಿಸಿದ ಪ್ರಧಾನಿಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಪುಷ್ಪಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.

ಇಂದಿನಿಂದ ಮೂರು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ