ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹಲವು ಮಾಜಿ ಸಿಎಂಗಳನ್ನು ನಿರ್ನಾಮ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ.
ಇಂದು ದೆಹಲಿಯಲ್ಲಿ ಮಾಜಿ ಪ್ರಧಾನಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ, ನಾನು ಜೆಡಿಎಸ್ ನಿರ್ನಾಮ ಮಾಡುತ್ತೇನೆ ಎಂಬ ಭಯ ಅವರಿಗೆ ಇದೆ. ಆದರೆ ನಿರ್ನಾಮ ಮಾಡುವ ಸಂಸ್ಕೃತಿ ನಮ್ಮದಲ್ಲ. ದೇವೇಗೌಡರೆ ಹಲವು ಮಾಜಿ ಮುಖ್ಯಮಂತ್ರಿಗಳನ್ನು ನಿರ್ನಾಮ ಮಾಡಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್ ಹಾಗೂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಮಾಜಿ ಸಿಎಂಗಳನ್ನು ನಿರ್ನಾಮ ಮಾಡಿದ್ದು ದೇವೇಗೌಡರು ಎಂದರು.
ಇನ್ನು ಹಲವು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಯಾವುದೇ ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.