ನವದೆಹಲಿ: ಮೇಕೆದಾಟು ಬಳಿ ಜಲವಿದ್ಯುತ್ ಯೋಜನೆಗಾಗಿ ಅಣೆಕಟ್ಟೆ ಕಟ್ಟುವ ಪ್ರಸ್ತಾಪಕ್ಕೆ ಅಡ್ಡಿ ಮಾಡುತ್ತಿರುವ ತಮಿಳುನಾಡಿನ ವಾದದಲ್ಲಿ ಹುರುಳಿಲ್ಲ. ತಮಿಳುನಾಡಿನದು ರಾಜಕೀಯ ಪ್ರೇರಿತವಾಗಿ ವಿರೋಧ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿಕೊಡುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ವಪಕ್ಷ ನಿಯೋಗ ಯಶಸ್ವಿಯಾಗಿದೆ.