ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ 
ರಾಜಕೀಯ

ಸಾಲ, ಬಡ್ಡಿ ಮನ್ನಾಗೆ ಶೆಟ್ಟರ್ ಆಗ್ರಹ

ರಾಜ್ಯದ 125ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಆವರಿಸಿದ್ದು ತಕ್ಷಣವೇ ರಾಜ್ಯ ಸರ್ಕಾರ ರೈತರ ಸಾಲ ಮತ್ತು ಬಡ್ಡಿ ಮನ್ನಾ ಮಾಡಬೇಕೆಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.

ಬೆಂಗಳೂರು: ರಾಜ್ಯದ 125ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಆವರಿಸಿದ್ದು ತಕ್ಷಣವೇ ರಾಜ್ಯ ಸರ್ಕಾರ ರೈತರ ಸಾಲ ಮತ್ತು ಬಡ್ಡಿ ಮನ್ನಾ ಮಾಡುವುದರ ಜತೆಗೆ ಸಮರೋಪಾದಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.

ರಾಜ್ಯದ ಹಲವು ಭಾಗಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ದೊಡ್ಡ ಮಟ್ಟದ ಬರಗಾಲ ಎದುರಾಗುವುದು ನಿಶ್ಚಿತ. ಹೀಗಾಗಿ ಸರ್ಕಾರ ಮೈ ಮರೆತು ಕುಳಿತುಕೊಳ್ಳಬಾರದು. ಸಹಕಾರ ಸಂಘಗಳು ಸೇರಿದಂತೆ ಹಲವು ಕಡೆ ರೈತರು ಮಾಡಿರುವ ಸಾಲವನ್ನು ಒಂದು ಬಾರಿ ಮನ್ನಾ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕು ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಬೆಳೆ ಹಾನಿಯಾದ ರೈತರ ಪ್ರತಿ ಹೆಕ್ಟೇರ್ ಭೂಮಿಗೆ ರೂ 25 ಸಾವಿರ ಪರಿಹಾರ ನೀಡಬೇಕು. ನಾನು ಸಿಎಂ ಆಗಿದ್ದ ಕಾಲದಲ್ಲಿ ಇಂತಹ ಪರಿಸ್ಥಿತಿ ಬಂದ ತಕ್ಷಣವೇ ರೈತರ ಸಾಲ ಮನ್ನಾ ಮಾಡಿದ್ದೆ. ಎಕರೆಗೆ ರೂ2,000 ಪರಿಹಾರ ನೀಡಿದ್ದೆ. ಕಂದಾಯ ಸಚಿವರು ರಾಜ್ಯದ ಬೇರೆ ಬೇರೆ ಕಡೆ ಹೋಗಿ ಸಭೆಗಳನ್ನು ನಡೆಸಿದರೆ ಸಾಕಾಗುವುದಿಲ್ಲ. ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. 125ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ತಕ್ಷಣ ಘೋಷಿಸಬೇಕು ಎಂದು ಆಗ್ರಹಿಸಿದರು.

ಕಬ್ಬು ಬೆಳೆಗಾರರ ಬಾಕಿ ಇನ್ನೂ ರೂ3,000  ಕೋಟಿಯಷ್ಟಿದೆ. ದ್ರಾಕ್ಷಿ, ದಾಳಿಂಬೆ ಬೆಳೆಗಾರರ ಸಂಕಷ್ಟ ಮುಂದುವರಿದಿದೆ. ಸರ್ಕಾರ ಈ ಕಡೆ ಗಮನ ಕೊಡಬೇಕು. ಕಬ್ಬು ಬೆಳೆಗಾರರ ಬಾಕಿ ಪಾವತಿಯಾಗುವಂತೆ ನೋಡಿಕೊಳ್ಳಬೇಕು. ದ್ರಾಕ್ಷಿ, ದಾಳಿಂಬೆ ಬೆಳೆಗಾರರ ಸಂಕಷ್ಟ ನಿವಾರಿಸಲು ವಿಶೇಷ ಪ್ಯಾಕೇಜ್ ಘೋಷಿಸಬೇಕು. ಇದಕ್ಕೆ ಕೇಂದ್ರ ಸರ್ಕಾರ ಶೇ.75ರಷ್ಟು ಹಣ
ನೀಡಲು ಸಿದ್ಧವಿದೆ. ಆದರೆ, ರಾಜ್ಯ ಸರ್ಕಾರ ಶೇ.25 ಹಣ ಕೊಡುವುದಕ್ಕೂ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.

ಈ ವಿಷಯವಾಗಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಭರವಸೆ ನೀಡಿ ಹಲವು ದಿನಗಳೇ ಕಳೆದಿವೆ. ಆದರೆ, ರಾಜ್ಯ ಸರ್ಕಾರ ಏನೂ ಮಾಡುತ್ತಿಲ್ಲ. ಇದೇ ಸ್ಥಿತಿ ಮುಂದುವ ರಿದರೆ ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಾರರೂ ಆತ್ಮಹತ್ಯೆಗೆ ಶರಣಾಗುವ ಸ್ಥಿತಿ ಬರುತ್ತದೆ. ಸರ್ಕಾರ ರೈತರ ವಿಷಯದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳದಿದ್ದರೆ ಈ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!