ಸಿಎಂ ಸಿದ್ದರಾಮಯ್ಯ 
ರಾಜಕೀಯ

ಬರ ಕೇಂದ್ರಕ್ಕೆ ಶೀಘ್ರ ಪ್ರಸ್ತಾವ: ಸಿಎಂ

ರಾಜ್ಯದ 98 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಶೀಘ್ರವೇ ಪ್ರಸ್ತಾವ ಸಲ್ಲಿಸಲಾಗುವುದು...

ಮೈಸೂರು: ರಾಜ್ಯದ 98 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಶೀಘ್ರವೇ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ 98 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದ್ದಾರೆ. ಈ ತಿಂಗಳ ಕೊನೆಯವರೆಗೆ ಪರಿಸ್ಥಿತಿ ಅವಲೋಕಿಸಿ ಉಳಿದ ಬರಪೀಡಿತ ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸಲಾಗುವುದು. ನಂತರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ನಂತರ ಕೇಂದ್ರದ ಬರ ಅಧ್ಯಯನ ತಂಡ ಬಂದು ಪರಿಶೀಲಿಸಿ ವರದಿ ಸಲ್ಲಿಸಲಿದೆ.  ಅದರ ಆಧಾರದ ಮೇಲೆ ಪರಿಹಾರ ಬಿಡುಗಡೆಯಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಕಂದಾಯ ಸಚಿವ ವಿ. ಶ್ರೀನಿವಾಸ-ಪ್ರಸಾದ್ ಮಾತನಾಡಿ, ತಾವು ಈಗಾಗಲೇ ಬೆಳಗಾವಿ, ಕಲಬುರುಗಿ ಹಾಗೂ ಬೆಂಗಳೂರು ಕಂದಾಯ ವಿಭಾಗಗಳಲ್ಲಿ ಪರಿಶೀಲನೆ ನಡೆಸಿ, ಬರ ಪರಿಸ್ಥಿತಿ ಬಗ್ಗೆ ವರದಿ ಸಿದ್ಧಪಡಿಸಿದ್ದು, ನಾಲ್ಕೈದು ದಿನಗಳಲ್ಲಿ ಮೈಸೂರು ವಿಭಾಗದ ಸಭೆಯನ್ನು ನಡೆಸಲಾಗುವುದು ಎಂದರು.  ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬರ ಪರಿಹಾರಕ್ಕಾಗಿ ಪ್ರಕೃತಿ ವಿಕೋಪ ನಿಧಿಯಿಂದ ರೂ. 749 ಕೋಟಿ ವೆಚ್ಚ ಮಾಡಿದೆ. ಕುಡಿವ ನೀರು, ಜನ ಜಾನುವಾರುಗಳಿಗೆ ಮೇವಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿದೆ. ದುಡಿಯುವ ಕೈಗಳಿಗೆ ಕೆಲಸ ಕೂಡ ನೀಡಲಾಗುವುದು ಎಂದು ಹೇಳಿದರು. ಕಬಿನಿ ಮತ್ತು ಹಾರಂಗಿ ಜಲಾಶಯಗಳು ಮಾತ್ರ ಭರ್ತಿಯಾಗಿವೆ. ಕೆಆರ್‍ಎಸ್ ಜಲಾಶಯ ಭರ್ತಿಯಾಗಿಲ್ಲ. ಇನ್ನೂ ಮಳೆಯ ದಿನಗಳು ಮುಗಿದಿಲ್ಲ. ಮಳೆಯಾಗುವ ನಿರೀಕ್ಷೆ ಮತ್ತು ಆಶಾಭಾವನೆ ಇದೆ ಎಂದು ಅವರು ಹೇಳಿದರು.

ಜೂನ್ ಹಾಗೂ ಜುಲೈನಲ್ಲಿ ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ ಬೀಜ ಮತ್ತು ಗೊಬ್ಬರ ಕೂಡಾ ಮಣ್ಣು ಪಾಲಾಗಿದೆ. ಈ ಪರಿಸ್ಥಿತಿ ಅರಿತು ರಾಜ್ಯ ಸರ್ಕಾರ ಈಗಾಗಲೇ 98 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಅಲ್ಲದೇ ರೈತರ ಸಾಲ ಮನ್ನಾ ಮಾಡುವ ದಿಕ್ಕಿನಲ್ಲೂ ಚಿಂತನೆ ನಡೆಸುತ್ತಿದೆ.

- ಎಚ್.ಕೆ.ಪಾಟೀಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ

ಸರಳ ದಸರಾವೇ ಖಚಿತ
ಮೈಸೂರು: ಮೈಸೂರು ದಸರಾ ಮಹೋತ್ಸವವನ್ನು ಪ್ರವಾಸೋದ್ಯಮ ಹಿತದೃಷ್ಟಿಯಿಂದ ವೈಭವವಾಗಿ ಆಚರಿಸಬೇಕು ಎಂಬ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ಬರಗಾಲ ಹಾಗೂ ರೈತರ ಆತ್ಮಹತ್ಯೆ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಆಚರಣೆ ಸರಳವಾಗಿರುತ್ತದೆ. ಪ್ರತಿವರ್ಷ ದಸರಾ ಆಚರಣೆಗೆ ರೂ.10 ಕೋಟಿ ಬಿಡುಗಡೆ ಮಾಡಲಾಗುತ್ತಿತ್ತು. ಈ ಬಾರಿ ಎಷ್ಟು ಕಡಿತ ಮಾಡುವಿರಿ? ಎಂಬ ಪ್ರಶ್ನೆಗೆ ಅವರು, `ನೋಡೋಣ' ಎಂದಷ್ಟೆ ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video