ಎಚ್‌.ಡಿ.ಕುಮಾರಸ್ವಾಮಿ 
ರಾಜಕೀಯ

ಬೆಂಗಳೂರಿಗರು ಮತ್ತೆ ಭ್ರಷ್ಟರನ್ನೇ ಆರಿಸಿದ್ದಾರೆ: ಕುಮಾರಸ್ವಾಮಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಹೀನಾಯ ಸೋಲಿನಿಂದ ಹತಾಶರಾಗಿರುವ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಹೀನಾಯ ಸೋಲಿನಿಂದ ಹತಾಶರಾಗಿರುವ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಬಿಎಂಪಿ 'ಚುನಾವಣೆಯಲ್ಲಿ ಭ್ರಷ್ಟರಿಗೇ ಗೆಲುವು ಸಿಕ್ಕಿದೆ. ಬೆಂಗಳೂರಿಗರು ಮತ್ತೆ ಭ್ರಷ್ಟರನ್ನೇ ಆರಿಸಿದ್ದಾರೆ' ಎಂದು  ಹೇಳಿದ್ದಾರೆ.
ಫಲಿತಾಂಶ ನಂತರ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ ಅವರು, ‘ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರವನ್ನು ನಾವು ಬಯಲಿಗೆಳೆದಿದ್ದೆವು. ಜನರ ಮುಂದೆ ಸತ್ಯವನ್ನು ತೆರೆದಿಟ್ಟಿದ್ದೆವು. ಆದರೂ ಜನರು ಭ್ರಷ್ಟರ ಕೈಗೇ ಅಧಿಕಾರ ನೀಡಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.
ಪದ್ಮನಾಭನಗರದಲ್ಲಿ ಏಳು ಮಂದಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಅವರೆಲ್ಲ ಕೆರೆ ನುಂಗಿರುವವರಾಗಿದ್ದು ಈ ಚುನಾವಣೆಯಲ್ಲಿ ಆರಿಸಿ ಬಂದಿರುವುದು ದುರಾದೃಷ್ಟಕರ ಎಂದು ಹೇಳಿರುವ ಕುಮಾರಸ್ವಾಮಿ ಅವರು, ಬೇಕಿದ್ದರೆ ಅವರ ವಿರುದ್ಧ ದಾಖಲೆ ನೀಡಲು ಸಿದ್ಧ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ