ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ಮೈತ್ರಿ ಸೂಕ್ತ ನಿರ್ಣಯಕ್ಕೆ ಖರ್ಗೆ ಆಗ್ರಹ

ಬಿಎಂಪಿ ಅಧಿಕಾರ ಹಿಡಿಯುವ ವಿಚಾರದಲ್ಲಿ ಜೆಡಿಎಸ್ ಜೊತೆ ಮೈತ್ರಿ ಪ್ರಸ್ತಾಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಲೋಕಸಭೆ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ....

ಬೆಂಗಳೂರು: ಬಿಬಿಎಂಪಿ ಅಧಿಕಾರ ಹಿಡಿಯುವ ವಿಚಾರದಲ್ಲಿ ಜೆಡಿಎಸ್ ಜೊತೆ ಮೈತ್ರಿ ಪ್ರಸ್ತಾಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಲೋಕಸಭೆ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇದೇ ಮೊದಲ ಬಾರಿಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಮೈತ್ರಿ ಪ್ರಸ್ತಾಪದ ಬಗ್ಗೆ ಪರ ಅಥವಾ ವಿರೋಧದ ಸುಳಿವು ನೀಡದ ಅವರು, ಪಕ್ಷದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಭಾನುವಾರ ಮಾತನಾಡಿದ ಅವರು, ಇದುವರೆಗೆ ಬಿಬಿಎಂಪಿ ಮೈತ್ರಿ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಪಕ್ಷವು ಮೈತ್ರಿ ಮಾಡಿಕೊಳ್ಳುವ ಸಂದರ್ಭದಲ್ಲಿ ಹಿಂದಿನ ಮತ್ತು ಮುಂದಿನ ಸಂಗತಿಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತದೆ. ಭವಿಷ್ಯದಲ್ಲಿ ಎದುರಾಗುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ದೃಷ್ಟಿಯಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.


ಈ ಬೆಳವಣಿಗೆಗೆ ಸಂಬಂಧಿಸಿದಂತೆ ನಾನು ಈವರೆಗೆ ಯಾವುದೇ ಪಾತ್ರ ವಹಿಸಿಲ್ಲ ಎಂದರು ಬಿಬಿಎಂಪಿ ಅಧಿಕಾರ ಗದ್ದುಗೆಗಾಗಿ ಬಿಜೆಪಿಯರು ಬಂದ್ರು, ಕೇಳಿದ್ರು, ಹೋದ್ರಷ್ಟೆ. ಆದರೆ, ಕಾಂಗ್ರೆಸ್‍ನವರು ಯಾರು ನನ್ನ ಬಳಿಗೆ ಈ ಬಗ್ಗೆ ಮಾತನಾಡಿಲ್ಲ. ಮೈತ್ರಿ ವಿಷಯವೇ ನಮ್ಮ ಬಳಿಗೆ ಬಂದಿಲ್ಲ.
ಎಚ್.ಡಿ. ದೇವೇಗೌಡ ಮಾಜಿ ಪ್ರಧಾನಿ

ಕಳೆದ ಎರಡು ವರ್ಷದಲ್ಲಿ ಕಾಂಗ್ರೆಸ್ ಮುಖಂಡರು ದೇವೇಗೌಡರನ್ನು, ಜೆಡಿಎಸ್ ನಾಯಕರಿಗೆ ಸೊಂಟದ ಕೆಳಗಿನ ಪದಗಳೆಲ್ಲವನ್ನೂ ಬಳಸಿದ್ದಾರೆ.ಇದನ್ನು ಇಟ್ಟುಕೊಂಡು ಜೆಡಿಎಸ್ ಕೈಜೋಡಿಸಲ್ಲ ಎಂಬ ವಿಶ್ವಾಸವಿದೆ. ಕೆಲ ದಿನಗಳಲ್ಲಿ ಅಚ್ಚರಿ ನಡೆಯಲಿದೆ. ಮೇಯರ್ ಆಗುವುದು ಬಿಜೆಪಿಯವರೆ, ಇದು ನಿಶ್ಚಿತ.
ಡಿ.ವಿ. ಸದಾನಂದ ಗೌಡ ಕೇಂದ್ರ ಸಚಿವ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!