ರಾಜಕೀಯ

ಪರಿಷತ್ ಚುನಾವಣೆ: ಕಾಂಗ್ರೆಸ್ ನಿಂದ ಮೂವರು ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ

Lingaraj Badiger

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಾಗಿರುವ ಸ್ಪರ್ಧಿಸಿರುವ ಮೂವರನ್ನು ಪಕ್ಷದಿಂದ ಉಚ್ಚಾಟಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ನಿರ್ಧರಿಸಿದೆ.

ನಾಮಪತ್ರ ಹಿಂಪಡೆಯಲು ನಿರಾಕರಿಸಿ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದರುವ ದಕ್ಷಿಣ ಕನ್ನಡ ಅಭ್ಯರ್ಥಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ದಯಾನಂದ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ  ಬಂಟ್ವಾಳ್‌ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಶಿಫಾರಸು ಮಾಡಿದ್ದಾರೆ.

ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ದಿಸಿರುವ ಕೆ.ಜಯ ಪ್ರಕಾಶ್‌ ಹೆಗ್ಡೆ ಹಾಗೂ ದಯಾನಂದ ರೆಡ್ಡಿ ಅವರನ್ನು ಮನವೊಲಿಸಲು ಸಚಿವ ಡಿ.ಕೆ.ಶಿವಕುಮಾರ ನಡೆಸಿದ ಸಂಧಾನ ವಿಫಲವಾಗಿತ್ತು. ಹೀಗಾಗಿ ಬಂಡಾಯಗಾರರ ವಿರದ್ಧ ಕಠಿಣ ಕ್ರಮಕ್ಕೆ ಪಕ್ಷ ಮುಂದಾಗಿದೆ.

ಡಿಸೆಂಬರ್ 27ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

SCROLL FOR NEXT