ವಿಧಾನಸಭೆ : ರಾಜ್ಯದಲ್ಲಿ ವಿದ್ಯುತ್ ಅಭಾವವಿ ದ್ದರೂ ಪರೀಕ್ಷಾ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಅನನುಕೂಲ ವಾಗದಂತೆ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಇಂಧನ
ಸಚಿವ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ಭರವಸೆನೀಡಿದ್ದಾರೆ. ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಜೆಡಿಎಸ್ನ ಕೆ.ಗೋಪಾಲಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಪ್ರತಿದಿನ 1,400 ಮೆಗಾ ವ್ಯಾಟ್ ನಿರ್ಬಂಧಿ ತ ವಿದ್ಯುತ್ ಕೊರತೆ ಇದೆ. 2015ರ ಏಪ್ರಿಲ್ ವೇಳೆಗೆ 800 ಮೆಗಾ ವ್ಯಾಟ್ ವಿದ್ಯುತ್ ಕೊರತೆ ಉಂಟಾಗಬಹುದೆಂದು ಅಂದಾಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಸಂದರ್ಭದಲ್ಲಿ ಅನನುಕೂಲವಾಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ರಾಜ್ಯದ ಎಲ್ಲ ವಿದ್ಯುತ್ ಉತ್ಪಾದನಾ ಘಟಕಗಳು ಹೆಚ್ಚು ಕಾರ್ಯಕ್ಷಮತೆಯಿಂದ ಕಾರ್ಯ ನಿರ್ವಹಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ನೀರಾವರಿ ಪಂಪ್ ಸೆಟ್ಗಳನ್ನು ಅಧಿಕ ಹೊರೆ ರಹಿತ ಸಮಯದಲ್ಲಿ ಉಪಯೋಗಿಸುವಂತೆ ರೈತರಿಗೆ ಕೋರಲಾಗಿದ್ದು, ಘೋಷಿತ ಅವಧಿಯಂತೆ ನಗರ ಪಟ್ಟಣ ಪ್ರದೇಶಗಳಲ್ಲಿ 22ರಿಂದ 24 ಗಂಟೆ, ಗ್ರಾಮೀಣ ಪ್ರದೇಶಗಳಲ್ಲಿ 7 ಗಂಟೆ 3 ಫೇಸ್ ವಿದ್ಯುತ್ ಹಾಗೂ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಧ್ಯಮಾವಧಿ ಮತ್ತು ಅಲ್ಪಾವಧಿ ಆಧಾರದ ಮೇಲೆ ವಿದ್ಯುತ್ ಖರೀದಿಸಲಾಗುತ್ತಿದೆ ಎಂದರು. ಆಗಸ್ಟ್ 1, 2013ರಿಂದ ಮಧ್ಯಮಾವಧಿ ಆಧಾರ ದಲ್ಲಿ 1500 ಮೆಗಾ ವ್ಯಾಟ್ ವಿದ್ಯುತ್ನ್ನು 2015 ರವರೆಗೆ ಖರೀದಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ.
ಅಲ್ಪಾವಧಿ ಆಧಾರದಲ್ಲಿ 500 ಮೆಗಾ ವ್ಯಾಟ್ ವಿದ್ಯುತ್ತನ್ನು ಆರ್ಟಿಸಿ ವಿಧಾನದಲ್ಲಿ 2014, ನವೆಂಬರ್ 15ರಿಂದ 2015ರ ಜೂನ್ 30ರವರೆಗೆ ಖರೀದಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಮೆ.ಗ್ಲೋಬಲ್ ಖಾಸಗಿ ಉತ್ಪಾದಕ ಸಂಸ್ಥೆಯಿಂದ 2015ರವರೆಗೆ 150 ಮೆಗಾವ್ಯಾಟ್ ಖರೀದಿಗೆ ಅನುಮತಿ ನೀಡಲಾಗಿದ್ದು, ಕೆಇಆರ್ಸಿ ಮೂಲಕ ಫೆ ಬ್ರವರಿ 2015ರಿಂದ ಜೂನ್ 2015ರ ಅವ„ಯಲ್ಲಿ 250 ಮೆಗಾ ವ್ಯಾಟ್ ವಿದ್ಯುತ್ ಖರೀದಿಸಲಾಗುವುದು ಎಂದರು. ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿ ಸ್ವಾವಲಂಬನೆ ಸಾಧಿ ಸಲು ಕೆಪಿಸಿಎಲ್ ವತಿಯಿಂದ 700 ಮೆಗಾ ವ್ಯಾಟ್ ಸಾಮರ್ಥ್ಯದ ಬಿಟಿಪಿಎಸ್ ಘಟಕ3 ಸ್ಥಾಪನೆಗೆ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದ್ದು. 1600 ಮೆಗಾ ವ್ಯಾಟ್ ಸಾಮರ್ಥ್ಯದ ಯಮರಸ್ ಯೋ ಜನೆಗೆ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ವಿಜಯಪುರದ ಕೂಡಗಿಯಲ್ಲಿ4,000 ಮೆಗಾ ವ್ಯಾಟ್ ಸಾಮರ್ಥ್ಯದ ಕಲ್ಲಿದ್ದಲು ಆಧಾರಿತ ಎನ್ಟಿಪಿಸಿ ವಿದ್ಯುತ್ ಸ್ಥಾವರ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.