ರಾಜಕೀಯ

ಮಾಹಿತಿ ನೀಡದ ಸರ್ಕಾರ: ಬಿಜೆಪಿ ಸದಸ್ಯರ ಸಭಾತ್ಯಾಗ

Rashmi Kasaragodu

ವಿಧಾನಸಭೆ: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರವ್ಯಾಪ್ತಿಯಲ್ಲಿ ನಡೆದ ಕಾಮಗಾರಿ ಅಕ್ರಮಗಳ ಬಗ್ಗೆ ಸಮರ್ಪಕ ಮಾಹಿತಿ ನೀಡದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಸದಸ್ಯರು ಮಂಗಳವಾರ ಸಭಾತ್ಯಾಗ ನಡೆಸಿದರು. ಕಳೆದ ಡಿಸೆಂಬರ್‍ನಲ್ಲಿ ನಡೆದ ಘಟನೆ ಕುರಿತಂತೆ ಮಾಹಿತಿ ಕೇಳಿದರೆ 2011ರ ಮಾಹಿತಿ ನೀಡಲಾಗಿದೆ. ಶಾಸಕ  ಮುನಿರತ್ನ ಅವರನ್ನು ರಕ್ಷಿಸಲು ರಾಜ್ಯ ಸರ್ಕಾರ ಇಂತಹ ಅಸಂಬದ್ದ  ಮಾಹಿತಿ ನೀಡುತ್ತಿದೆ. ಭ್ರಷ್ಟ ಅಧಿಕಾರಿಗಳು ಹಾಗೂ ರಾಜಕಾರಣಿಗಳನ್ನು ರಕ್ಷಿಸಲು ಸರ್ಕಾರ ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು.
ಲೋಕಾಯುಕ್ತ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಚುರುಕು  ಮಾಡುತ್ತಿದ್ದಂತೆ ಪೊಲೀಸ್ ವರಿಷ್ಠಾಧಿಕಾರಿಯನ್ನೇ ವರ್ಗಾಯಿಸಲಾಗಿದೆ. ಭ್ರಷ್ಟಾಚಾರ
ರಹಿತ ಆಡಳಿತ ನಡೆಸುತ್ತೇವೆ ಎನ್ನುವವರು ಇಂತಹ ಆಡಳಿತ ನಡೆಸುತ್ತಿದ್ದಾರೆ. ಸದನಕ್ಕೂ ಸ್ಪಷ್ಟ ಮಾಹಿತಿ ನೀಡುತ್ತಿಲ್ಲ. ಸದಸ್ಯರಿಗೂ ಅರೆಬೆಂದ ಮಾಹಿತಿ ನಿಡಲಾಗುತ್ತಿದೆ
ಎಂದು ಶೆಟ್ಟರ್ ಹೇಳಿದರು.
ಇದಕ್ಕೆ ಪ್ರತಿಕ್ರಯಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ  ತನಿಖೆ ನಡೆಸಲಾಗುತ್ತಿದೆ. ಯಾರನ್ನೂ ರಕ್ಷಿಸುವ ಪ್ರಯತ್ನಕ್ಕೆ ಸರ್ಕಾರ ಮುಂದಾಗಿಲ್ಲ . ಸಿಐಡಿ  ತನಿಖೆ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗು ವುದು. ಆದರೆ, ಬಿಜೆಪಿ ಶಾಸಕರು ಇದನ್ನು ರಾಜಕೀಯಗೊಳಿಸುತ್ತಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಆಡಳಿತಾತ್ಮಕವಲ್ಲದ ಹುದ್ದೆಗೆ ಹಾಗೂ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೇ ನಿವೃತ್ತಿ  ಎಂಜಿನಿಯರ್ ಸಿ.ನಾರಾಯಣ ಸೇರಿದಂತೆ ಎಲ್ಲ ಎಂಜಿನಿಯರ್‍ಗಳ ವಿರುದ್ದ  ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

SCROLL FOR NEXT