ವಿಧಾನಸಭೆ: ಕಳೆದ ಮೂರು ವರ್ಷಗಳಿಂದ 12 ಸರ್ಕಾರಿ ಅಧಿಕಾರಿಗಳು ಆಸ್ತಿ ಪ್ರಮಾಣ ಪತ್ರ ಸಲ್ಲಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಆರು ಐಪಿಎಸ್, ಇಬ್ಬರು ಐಎಫ್ಎಸ್ ಹಾಗೂ ನಾಲ್ವರು ಕೆಎಎಸ್ ಅಧಿಕಾರಿಗಳು 2011, 2012 ಹಾಗೂ 2013ನೇ ಸಾಲಿನಲ್ಲಿ ಸರ್ಕಾರಕ್ಕೆ ಪ್ರಮಾಣಪತ್ರ ನೀಡದಿರುವುದು ಗಮನಕ್ಕೆ ಬಂದಿದೆ ಎಂದು ಚನ್ನಗಿರಿ ಶಾಸಕ ವಡ್ನಾಳ್ ರಾಜಣ್ಣ ಅವರ ಚುಕ್ಕೆ ರಹಿತ ಪ್ರಶ್ನೆಗೆ ನೀಡಿರುವ ಉತ್ತರದಲ್ಲಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆದರೆ ಆದರೆ ಈ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಂಡ ಬಗ್ಗೆ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ.