ವಿಧಾನ ಪರಿಷತ್ತು: 26 ಕಿ.ಮೀ. ಉದ್ದದ ಶಿರಾಡಿ ಘಾಟಿ ರಸ್ತೆ ಅಭಿವೃದ್ಧಿ ಕಾರ್ಯದ ಮೊದಲ ಹಂತದ ಕಾಮಗಾರಿ ಮೇನಲ್ಲಿ ಅಂತ್ಯಗೊಳ್ಳಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಸದಸ್ಯ ಎಂ.ಶ್ರೀನಿವಾಸ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಡೀ ಕಾಮಗಾರಿಯನ್ನು ಎರಡು ಭಾಗವಾಗಿ ವಿಂಗಡಿಸಲಾಗಿದೆ. ಮೊದಲ ಹಂತದ ಕಾಮಗಾರಿ ತಕ್ಷಣವೇ ಆರಂಭವಾಗುತ್ತದೆ. ಘಾಟಿ ರಸ್ತೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮತ್ತು ಪರಿಸರ ಸ್ನೇಹಿ ಕಾಮಗಾರಿ ನಡೆಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ ಎಂದರು. ಮುಂದಿನ ಮಳೆಗಾಲದೊಳಗೆ ಶಿರಾಡಿ ಘಾಟಿ ರಸ್ತೆ 13 ಕಿ.ಮೀ.ನಷ್ಟು ಅಭಿವೃದ್ಧಿ ಪಡಿಸುವುದು ನಮ್ಮ ಗುರಿ. ಉಳಿದ 13 ಕಿ.ಮೀ. ರಸ್ತೆಯ ಅಭಿವೃದ್ಧಿ ಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ನಡೆದಿದೆ, ಟೆಂಡರ್ ಮುಗಿದ ನಂತರ 6 ತಿಂಗಳೊಳಗೆ ಕಾಮಗಾರಿ ಮುಗಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.