ವಿಧಾನ ಸಭೆ ಕಲಾಪ 
ರಾಜಕೀಯ

ಭೂ ಸುಧಾರಣೆ ಕಾಯ್ದೆ ಗೆ ತಿದ್ದುಪಡಿ ಚಿಂತನೆ

ಸಣ್ಣ ಮಟ್ಟದ ಬಗರ್ಹುಕುಂ ಸಾಗುವಳಿದಾರರನ್ನು ದೃಷ್ಟಿಯಲ್ಲಿಟ್ಟುಕೊಂಡು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ...

ವಿಧಾನಪರಿಷತ್ತು: ಸಣ್ಣ ಮಟ್ಟದ ಬಗರ್ಹುಕುಂ ಸಾಗುವಳಿದಾರರನ್ನು ದೃಷ್ಟಿಯಲ್ಲಿಟ್ಟುಕೊಂಡು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
ಇದೇ ವೇಳೆ, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ದೊಡ್ಡ ಹಿಡುವಳಿದಾರರನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುವುದಾಗಿ ಅವರು ಘೋಷಿಸಿದ್ದಾರೆ. ಸದಸ್ಯರಾದ ಅಲ್ಲಮಪ್ರಭು ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ರೈತರನ್ನು ಅದೇ ಭೂಮಿಯಲ್ಲಿ ಉಳಿಸಬೇಕೆಂಬಆಲೋಚನೆ ಸರ್ಕಾರದ್ದು. ಈ ನಿಟ್ಟಿನಲ್ಲಿ ಕಾಯ್ದೆಗೆ ಅಗತ್ಯ ತಿದ್ದುಪಡಿ ತರಲಾಗುತ್ತದೆ ಎಂದರು.
10 ಎಕರೆಗಿಂತ ಹೆಚ್ಚು ಸರ್ಕಾರಿ ಭೂಮಿ ಒತ್ತುವರಿಯಾಗಿರುವ ಪ್ರಕರಣಗಳಲ್ಲಿ ಆದ್ಯತೆ ಮೇಲೆ ತೆರವು ಮಾಡಲಾಗುತ್ತಿದೆ. ಎರಡನೇ ಹಂತದಲ್ಲಿ 5ರಿಂದ 10 ಎಕರೆ ಒತ್ತುವರಿ ಮಾಡಿಕೊಂಡವರನ್ನು ತೆರವು ಮಾಡಲಾಗುತ್ತದೆ. ಸಣ್ಣ ಹಿಡುವಳಿದಾರರನ್ನು ತೆರವು ಮಾಡುವ ಆಲೋಚನೆ ಸದ್ಯಕ್ಕಿಲ್ಲ. ರಾಜ್ಯದಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಬೆಂಗಳೂರು ಹೊರತುಪಡಿಸಿ ಆದ್ಯತೆ ಮೇಲೆ 84851 ಎಕರೆ ಒತ್ತುವರಿ ತೆರವು ಮಾಡಬೇಕಾಗಿದೆ. ಈ ವಿಚಾರದಲ್ಲಿ ಹೇಗೆ ತೆರವು ಮಾಡುತ್ತೇವೆ ಎಂದು ನ್ಯಾಯಾಲಯಕ್ಕೂ ಕ್ರಿಯಾ ಯೋಜನೆ ನೀಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT