ರಾಜಕೀಯ

ಸಕ್ಕರೆ ಕಾರ್ಖಾನೆಗಳ ಮೇಲ್ಮನವಿ ವಜಾ

ಪ್ರತಿ ಟನ್ ಕಬ್ಬಿಗೆ ಸರ್ಕಾರ ನಿಗದಿ ಮಾಡಿರುವ ರು. 2500 ಅನ್ನು ಬೆಳೆಗಾರರಿಗೆ ನೀಡುವಂತೆ ಸರ್ಕಾರ...

ಬೆಂಗಳೂರು: ಪ್ರತಿ ಟನ್ ಕಬ್ಬಿಗೆ ಸರ್ಕಾರ ನಿಗದಿ ಮಾಡಿರುವ ರು. 2500 ಅನ್ನು ಬೆಳೆಗಾರರಿಗೆ ನೀಡುವಂತೆ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಬಹುತೇಕ ಎತ್ತಿ ಹಿಡಿದಿದೆ.

ಸರ್ಕಾರ ನಿಗದಿಪಡಿಸಿರುವ ಈ ದರ ಕಾನೂನು ಬಾಹಿರವಾಗಿದ್ದು, ಇದನ್ನು ನೀಡಲು ಸಾಧ್ಯವಿಲ್ಲ ಎಂದು ಸಕ್ಕರೆ ಕಾರ್ಖಾನೆ ಮಾಲೀಕರು ಹೈಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಮಾಲೀಕರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ರಾಜ್ಯ ಸರ್ಕಾರ ಕರ್ನಾಟಕ ಸಕ್ಕರೆ ನಿಯಂತ್ರಣ (ಉತ್ಪಾದನೆ ಮತ್ತು ಪೂರೈಕೆ) ಕಾಯಿದೆ ಜಾರಿಗೆ ತಂದು, ಸಕ್ಕರೆ ನಿಯಂತ್ರಣ ಮಂಡಳಿ ರಚನೆ ಮಾಡಿತ್ತು.

ಆ ಮಂಡಳಿ ಹಲವು ಸಭೆ ನಡೆಸಿ ಅಂತಿಮವಾಗಿ 2013ರ ನ.23ರಂದು ಪ್ರತಿ ಟನ್ ಕಬ್ಬಿಗೆ ರು. 2500 ನಿಗದಿ ಮಾಡಿ ಆದೇಶ ಹೊರಡಿಸಿತು. ಇದನ್ನು ಪ್ರಶ್ನಿಸಿ ಸಕ್ಕರೆ ಕಾರ್ಖಾನೆ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್‍ನ ಏಕಸದಸ್ಯ ಪೀಠ, ರಾಜ್ಯ ಸರ್ಕಾರದ ಆದೇಶ ಎತ್ತಿಹಿಡಿದು ರೈತರಿಗೆ ನಿಗದಿಪಡಿಸಿರುವ ಬೆಂಬಲ ಬೆಲೆ ನೀಡುವಂತೆ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಸಕ್ಕರೆ ಕಾರ್ಖಾನೆ ಮಾಲೀಕರು ಹೈಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ದಾಖಲಿಸಿದ್ದರು.

ಗುರುವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಡಿ.ಎಚ್.ವಘೇಲಾ ಮತ್ತು ನ್ಯಾ. ರಾಮಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠ, ಅರ್ಜಿ ವಜಾ ಮಾಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಎಫ್ಆರ್‍ಪಿ ದರ ಪ್ರತಿ ಟನ್‍ಗೆ ರು 2100 ಬೆಲೆ ನಿಗದಿಮಾಡಿದ್ದು, ರಾಜ್ಯ ಸರ್ಕಾರ ಬೆಂಬಲ ಬೆಲೆಯನ್ನು ರು 2500ಕ್ಕೆ ಏರಿಸಿದೆ. ಕೇಂದ್ರ ಸರ್ಕಾರ ನಿಗದಿ ಪಡಿಸಿರುವ ದರಕ್ಕೆ ರಾಜ್ಯ ಸರ್ಕಾರ ಬದ್ಧವಾಗಬೇಕು. ಸರ್ಕಾರಕ್ಕೆ ಕಬ್ಬಿನ ದರ ನಿಗದಿ ಮಾಡುವ ಅಧಿಕಾರ ಇಲ್ಲ. ಕೇಂದ್ರದ ನಂತರ ರಾಜ್ಯ ಸರ್ಕಾರ ಆದೇಶ ಹೊರಡಿಸಿದರೆ ಕೇಂದ್ರದ ಆದೇಶ ಮಾನ್ಯವಾಗುತ್ತದೆಯೇ ಹೊರತು ರಾಜ್ಯದ ಆದೇಶವಲ್ಲ ಎಂದು ವಾದಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!