ರಾಮಲಿಂಗಾರೆಡ್ಡಿ 
ರಾಜಕೀಯ

ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ತರಾಟೆ

ಅಸಮರ್ಪಕ ಕಸ ವಿಲೇವಾರಿ ಹಾಗೂ ಫ್ಲೆ ಕ್ಸ್ ನಿಯಂತ್ರಣಕ್ಕೆ ಕಡಿವಾಣ ಹಾಕದ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ...

ಬೆಂಗಳೂರು: ಅಸಮರ್ಪಕ ಕಸ ವಿಲೇವಾರಿ ಹಾಗೂ ಫ್ಲೆ ಕ್ಸ್ ನಿಯಂತ್ರಣಕ್ಕೆ ಕಡಿವಾಣ ಹಾಕದ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತರಾಟೆಗೆ ತೆಗೆದುಕೊಂಡರು. ಜಯನಗರದ ದಕ್ಷಿಣ ವಲಯ ಜಂಟಿ ಆಯುಕ್ತರ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಕಸ ಹಾಗೂ ಫ್ಲೆ ಕ್ಸ್ ಹಾವಳಿ ಬಗ್ಗೆ ಅಧಿಕಾರಿಗಳ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಗರಂ ಆದರು. ದಕ್ಷಿಣ ವಲಯದ ಹೆಚ್ಚಿನ ಭಾಗಗಳಲ್ಲಿ ತ್ಯಾಜ್ಯನಿರ್ವಹಣೆ ಸಮರ್ಪಕವಾಗಿಲ್ಲ. ರಸ್ತೆ ಗುಂಡಿಗಳು ಹೆಚ್ಚಿದ್ದು, ಪಾದಚಾರಿ ಮಾರ್ಗಗಳಲ್ಲಿ ಕಸ ಸುರಿಯಲಾಗುತ್ತಿದೆ. ಈ ಬಗ್ಗೆ ಹೈಕೋರ್ಟ್‍ನಿಂದ ಹಲವು ಬಾರಿ ನಿರ್ದೇಶನಗಳು ಬಂದಿದ್ದರೂ ಅಧಿಕಾರಿಗಳು ಎಚ್ಚರ ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಫ್ಲೆ ಕ್ಸ್  ನಿಷೇಧಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದರೆ ಬಿಬಿಎಂಪಿ ಅಧಿಕಾರಿಗಳು ತೆರವುಗೊಳಿಸಲು ಮುಂದಾಗುತ್ತಿಲ್ಲ. ಅನಧಿಕೃತ ಜಾಹೀರಾತು ಫಲಕ, ಬ್ಯಾನರ್ ಜತೆಗೆ  ಫ್ಲೆಕ್ಸ್ ಗಳ ಹಾವಳಿಹೆಚ್ಚಿದೆ. ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಫಲಕ ಹಾಗೂ  ಫ್ಲೆಕ್ಸ್ ಗಳನ್ನು ತೆರವು ಮಾಡಬೇಕು. ಕಸ ವಿಲೇವಾರಿ ಹಾಗೂ  ಫ್ಲೆಕ್ಸ್  ತೆರವುಗೊಳಿಸುವ ಪ್ರಕ್ರಿಯೆ ಯಲ್ಲಿ ಲೋಪ ಕಂಡುಬಂದರೆ ವಲಯದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾಗೂ ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುತ್ತದೆ. ವಲಯದ ಜಂಟಿ ಆಯುಕ್ತರು ಎಂಜಿನಿಯರ್‍ಗಳಿಗೆ ರು. 50ಸಾವಿರವರೆಗೂ ದಂಡ ವಿಧಿಸಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದರು. ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಗುತ್ತಿಗೆ ದಾರರು ಸಮರ್ಪಕವಾಗಿ ಕಸ ವಿಲೇವಾರಿ ಮಾಡದಿದ್ದರೆ ಬಿಲ್  ಪಾವತಿಸದಂತೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿವಾರ್ಡ್‍ಗೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ  ಆಸಕ್ತಿ ತೋರಿದ್ದಾರೆ ಎಂದು  ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!