ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಸುಳ್ಳು ಹೇಳೋದು ಬಿಜೆಪಿಯ ಕಸುಬು: ಸಿಎಂ

ಜೆಪಿಯವರು ಬರೀ ಸುಳ್ಳು ಹೇಳಿಕೊಂಡು ಕಾಲ ಕಳೆಯುತ್ತಿದ್ದಾರೆ...

ಮೈಸೂರು: ಸುಳ್ಳಿನ ರಾಜಕಾರಣ ಮಾಡಿಕೊಂಡು ಬಂದಿರುವ ಬಿಜೆಪಿಯವರು ಬರೀ ಸುಳ್ಳು ಹೇಳಿಕೊಂಡು ಕಾಲ ಕಳೆಯುತ್ತಿದ್ದಾರೆ. ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಕಸುಬಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್ಸಿ ಅಧ್ಯಕ್ಷ ಸ್ಥಾನಕ್ಕೆ ವಿ.ಆರ್.ಸುದರ್ಶನ್ ಹೆಸರು ಶಿಫಾರಸು ಮಾಡಲಾಗಿದೆ. ಸುದರ್ಶನ್ ವಿಧಾನ ಪರಿಷತ್ ಸದಸ್ಯರಾಗಿದ್ದಾಗ ಯಾವುದೋ ಟ್ರಸ್ಟ್‌ಗೆ ಪತ್ರ ಬರೆದಿರುವುದನ್ನೇ ವಿವಾದ ಮಾಡುತ್ತಿದದಾರೆ.

ಶಾಸಕರಾದವರು, ವಿವಿಧ ಕಾರ್ಯಕ್ಕೆ ಸಂಬಂಧಿಸಿದಂತೆ ಟ್ರಸ್ಟ್‌ಗಳು, ಕುಲಪತಿ ಸೇರಿದಂತೆ ಇನ್ನಿತರರಿಗೆ ಪತ್ರ ಬರೆಯುವುದು ಸಾಮಾನ್ಯ. ಶಾಸಕರು, ಸಚಿವರು ಪತ್ರ ಬರೆಯುವುದು ಅಪರಾಧವೇ ಎಂದು ಪ್ರಶ್ನಿಸಿದರು.

ಕೆಪಿಎಸ್‌ಸಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಕೇಳಿರುವ ಮಾಹಿತಿ ಒದಗಿಸಲಾಗಿದೆ. ಸರ್ಕಾರದ ವತಿಯಿಂದ ನಿಯಮಾನುಸಾರ ನೇಮಕಕ್ಕೆ ಶಿಫಾರಸು ಮಾಡಲಾಗಿದೆ.

ಯಾವುದೇ ನೀತಿ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಬಿಜೆಪಿಯವರಿಗೆ ಸುಳ್ಳು ಹೇಳಿ ಜನರಿಗೆ ನಂಬಿಸುವುದು ಕರಗತವಾಗಿದೆ. ಈ ವಿಚಾರದಲ್ಲೂ ಸುಳ್ಳನ್ನೇ ಹೇಳಲು ಹೊರಟಿದ್ದಾರೆ ಎಂದು ಕಿಡಿಕಾರಿದು.

ಗೋವಿಂದಯ್ಯ ಭೇಟಿ: ಕೆಪಿಎಸ್ಸಿ ಸದಸ್ಯ ಸ್ಥಾನಕ್ಕೆ ಶಿಫಾರಸು ಆಗಿರುವ ಪ್ರೋ.ಎಚ್.ಗೋವಿಂದಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿಯಾದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದಯ್ಯ, ಕೆಪಿಎಸ್‌ಸಿ ಸದಸ್ಯ ಸ್ಥಾನಕ್ಕೆ ಶಿಫಾರಸು ಮಾಡಿದೆ. ಸರ್ಕಾರ ಹಾಗೂ ರಾಜ್ಯಪಾಲರು ಅಂತಿಮ ತೀರ್ಮಾನ ಕೈಗೊಳ್ಳಬೇಕಾಗಿದೆ ಹೊರತು ನಮ್ಮದೇನಿಲ್ಲ ಎಂದರು.

ಕೆಪಿಎಸ್‌ಸಿಗೆ ನೇಮಕದ ವಿಚಾರವನ್ನು ಬಿಜೆಪಿಯವರು ಸುಮ್ಮಸುಮ್ಮನೆ ರಾಜಕೀಯ ಮಾಡುತ್ತಿದ್ದಾರೆ. ಕೆಪಿಎಸ್ಸಿಗೆ ನೇಮಕವನ್ನು ಬಹಳ ದಿನಗಳ ಕಾಲ ಖಾಲಿ ಬಿಡುವುದು ಯಾವ ರೀತಿಯಿಂದಲೂ ಸರಿಯಲ್ಲ.

ಲಕ್ಷಾಂತರ ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯಬೇಕಿದೆ. ಹೀಗಾಗಿ, ಅಧ್ಯಕ್ಷರು ಹಾಗೂ ಸದಸ್ಯರ ನೇಮಕವೂ ಆಗಬೇಕಿದೆ. ಎಲ್ಲ ವರ್ಗಕ್ಕೂ ಪ್ರಾತಿನಿಧ್ಯ ನೀಡುವ ಉತ್ತಮವಾದ ತಂಡವನ್ನು ಸರ್ಕಾರವು ಶಿಫಾರಸು ಮಾಡಿದೆ.

ರಾಜ್ಯಪಾಲರಿಗೆ ಸರ್ಕಾರ ಮನವರಿಕೆ ಮಾಡಿಕೊಟ್ಟಿದ್ದು, ಅದಕ್ಕೆ ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ