ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ 
ರಾಜಕೀಯ

ಸಿಎಂ ಹುದ್ದೆ ಖಾಲಿಯಿಲ್ಲ: ಮಲ್ಲಿಕಾರ್ಜುನ ಖರ್ಗೆ

ಮುಖ್ಯಮಂತ್ರಿ ಬದಲಾವಣೆ ವಿಚಾರ, ಚರ್ಚೆಗಳು ಅನಗತ್ಯ...

ಹುಬ್ಬಳ್ಳಿ/ಕೋಲಾರ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಡೆಯುತ್ತಿರುವ ಚರ್ಚೆಗಳು ಅನಗತ್ಯ ಎಂದು ಕಾಂಗ್ರೆಸ್‌ನ ದಲಿತ ಮುಖಂಡರಿಬ್ಬರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇದೆಲ್ಲ ಊಹಾಪೋಹ. ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಆಡಳಿತ ನಿರ್ವಹಿಸುತ್ತಿದ್ದಾರೆ. ಇಂಥ ಸನ್ನಿವೇಶದಲ್ಲಿ ಅವರನ್ನು ಕೆಳಗಿಳಿಸುವ ಪ್ರಶ್ನೆಯೇ ಉದ್ಭವಿಸದು ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಕೋಲಾರ ಸಂಸದ ಕೆ.ಎಚ್.ಮುನಿಯಪ್ಪ ಸ್ಪಷ್ಟವಾಗಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ರಾಜ್ಯ ಸರ್ಕಾರ ಸ್ಥಿರವಾಗಿದೆ, ಇದನ್ನು ಅಸ್ಥಿರಗೊಳಿಸಬೇಕು ಎನ್ನುವ ನಿಟ್ಟಿನಲ್ಲಿ ಕೆಲವರು ಊಹಾಪೋಹ ಸೃಷ್ಟಿಸುತ್ತಿದ್ದಾರೆ. ಇದಕ್ಕೆ ಯಾರೂ ಕಿವಿಗೊಡಬಾರದು ಎಂದರು.

ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಸಚಿವ ಶ್ರೀನಿವಾಸ ಪ್ರಸಾದ್ ಹೇಳಿಕೆ ತಿರುಚುವ ಪ್ರಯತ್ನ ಮಾಡಲಾಗಿದೆ. ಕಾಂಗ್ರೆಸ್ ಮಾತ್ರ ದಲಿತರಿಗೆ ಮನ್ನಣೆ ನೀಡುತ್ತದೆ. ಮುಂದಿನ ದಿನಗಳಲ್ಲಿ ದಲಿತರೊಬ್ಬರು ಮುಖ್ಯಮಂತ್ರಿಯಾಗುವುದಾದರೆ ಅದು ಕಾಂಗ್ರೆಸ್‌ನಿಂದ ಎಂಬ ಹೇಳಿಕೆ ನೀಡಿದ್ದರು.

ಆದರೆ ಈ ಹೇಳಿಕೆಗೆ ಬೇರೆ ಬಣ್ಣ ನೀಡಿ, ದಲಿತರನ್ನು ಎತ್ತಿಕಟ್ಟಿ ಭವಿಷ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿಯಾಗಲು ಹೊರಟರೆ ಅದಕ್ಕೆ ಅಡ್ಡಗಾಲು ಹಾಕಲು ಇಂಥ ಷಡ್ಯಂತ್ರ ರೂಪಿಸಲಾಗಿದೆ. ಶ್ರೀನಿವಾಸಪ್ರಸಾದ್ ಇಂಥ ಹೇಳಿಕೆ ನೀಡುವ ಅಗತ್ಯವೇ ಇರಲಿಲ್ಲ ಎಂದು ಖರ್ಗೆ ಹೇಳಿದರು.

ಹೊಟ್ಟೆಕಿಚ್ಚಿನ ಕೆಲಸ: ಕಾಂಗ್ರಸ್‌ನಲ್ಲಿ ಯಾವುದೇ ನಿರ್ಣಯ ಹೊರಬೀಳುವುದು ಹೈಕಮಾಂಡ್‌ನಿಂದ. ಸರ್ಕಾರ ಸ್ಥಿರವಾಗಿರುವುದನ್ನು ಸಹಿಸದವರು ಎಣ್ಣೆ ಹಾಕುವ, ಬೆಂಕಿ ಹಚ್ಚುವ, ಉಪ್ಪು-ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ.

ಇದರಿಂದ ಕಾಂಗ್ರೆಸ್ ಮೇಲೆ ಯಾವುದೇ ಪರಿಣಾಮ ಬೀರದು. ರಾಜ್ಯದ ಹಿತ, ಅಭಿವೃದ್ಧಿ ಬಯಸದ ಕೆಲವರು ಮುಖ್ಯಮಂತ್ರಿ ಬದಲಾವಣೆಯ ಸುದ್ದಿ ಹರಿಬಿಟ್ಟು ಕುತಂತ್ರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಸುಭದ್ರವಾಗಿಲ್ಲ ಎಂದಾದಲ್ಲಿ ವಿದೇಶಿ, ಹೊರ ರಾಜ್ಯದ ಬಂಡವಾಳ ಹೂಡಿಕೆದಾರರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಾರೆ.

ತನ್ಮೂಲಕ ಅಭಿವೃದ್ಧಿ ಕುಂಠಿತವಾಗುತ್ತದೆ ಎನ್ನುವ ದುರುದ್ದೇಶದಿಂದ ಇಂಥ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಷ್ಟರಲ್ಲಿಯೇ ಭರ್ತಿ ಮಾಡಲಿದ್ದಾರೆ.

ಅರ್ಹರಿಗೆ ಸಚಿವ ಸ್ಥಾನ ಸಿಗಲಿದೆ. ಈ ಸ್ಥಾನಕ್ಕೆ ಇರುವುದು ನಿಜ. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್‌ನಲ್ಲಿ ಅಸಮಾಧಾನವಿದೆ ಎಂದು ಉಲ್ಲೇಖಿಸುವುದು ಸರಿಯಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!