ಶಾಸಕ ಆನಂದ್ ಸಿಂಗ್ (ಸಂಗ್ರಹ ಚಿತ್ರ) 
ರಾಜಕೀಯ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಆನಂದ್ ಸಿಂಗ್‌ಗೆ ಜಾಮೀನು

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಸಿಬಿಐ ವಿಶೇಷ ಅಧಿಕಾರಿಗಳಿಂದ ಬಂಧಿತರಾಗಿದ್ದ ಶಾಸಕ ಆನಂದ್ ಸಿಂಗ್...

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಸಿಬಿಐ ವಿಶೇಷ ಅಧಿಕಾರಿಗಳಿಂದ ಬಂಧಿತರಾಗಿದ್ದ ಶಾಸಕ ಆನಂದ್ ಸಿಂಗ್ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಬಳ್ಳಾರಿಯ ವಿಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರಿಗೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರು ಶೂರಿಟಿ, ಜಾಮೀನಿನ ಬಳಿಕ ಸಾಕ್ಷ್ಯಾಧಾರ ನಾಶಪಡಿಸದಂತೆ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳ ಮೇರೆಗೆ ಶಾಸಕ ಆನಂದ್ ಸಿಂಗ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ವಿಜಯನಗರ ಶಾಸಕ ಆನಂದ್ ಸಿಂಗ್ ವಿರುದ್ಧ ಒಟ್ಟು 3 ಪ್ರಕರಣಗಳು ದಾಖಲಾಗಿತ್ತು. ಈ ಪೈಕಿ 1 ಪ್ರಕರಣವನ್ನು ಹೊರತು ಪಡಿಸಿ ಉಳಿದ ಎರಡೂ ಪ್ರಕರಣಗಳಲ್ಲಿ ಜಾಮೀನು ಆನಂದ್ ಸಿಂಗ್‌ಗೆ ಜಾಮೀನು ದೊರೆತಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಉಳಿದ ಒಂದು ಪ್ರಕರಣದ ಜಾಮೀನು ಪ್ರಕ್ರಿಯೆ ತಡವಾಗಿತ್ತು. ಇದೀಗ ನ್ಯಾಯಾಲಯ ಜಾಮೀನು ನೀಡಿದೆ.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಈ ಹಿಂದೆ ಬಂಧಿತರಾಗಿದ್ದ ಎಲ್ಲಾ ಆರೋಪಿಗಳಿಗೆ ಇದೀಗ ಜಾಮೀನು ದೊರೆತಂತಾಗಿದೆ. ಕಳೆದ 2013 ಅಕ್ಟೋಬರ್ 17ರಂದು ಶಾಸಕ ಆನಂದ್ ಸಿಂಗ್ ಅವರನ್ನು ಬೆಂಗಳೂರಿನ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT