ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ (ಸಂಗ್ರಹ ಚಿತ್ರ) 
ರಾಜಕೀಯ

ಸಚಿವರೊಬ್ಬರಿಂದ ಅಕ್ರಮ: ರೇವಣ್ಣ

ಬಿಡಿಎ ಬಡಾವಣೆಗಳಲ್ಲಿ ನಡೆದ ಡಿನೋಟಿಫಿಕೇಷನ್ ನಲ್ಲಿ ಹಾಲಿ ಸಚಿವರೊಬ್ಬರಿಂದ ಅಕ್ರಮವಾಗಿದ್ದು..

ಬೆಂಗಳೂರು: ಬಿಡಿಎ ಬಡಾವಣೆಗಳಲ್ಲಿ ನಡೆದ ಡಿನೋಟಿಫಿಕೇಷನ್ ನಲ್ಲಿ ಹಾಲಿ ಸಚಿವರೊಬ್ಬರಿಂದ ಅಕ್ರಮವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಯವರಿಗೆ ಕಾರ್ಯದರ್ಶಿಗಳು ಪ್ರಸ್ತಾಪ ಮಂಡಿಸಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಹೇಳಿದ್ದಾರೆ.

ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾನೂನು ಮತ್ತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು ಈ ಅಕ್ರಮದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಪ್ರಸ್ತಾಪವನ್ನೂ ಮಂಡಿಸಿದ್ದಾರೆ. ಈ ಸಭೆಯ ನಡಾವಳಿಯನ್ನು ಪರಿಶೀಲಿಸಿದರೆ ಎಲ್ಲವೂ ಅರಿವಾಗುತ್ತದೆ. ಮುಖ್ಯ ಕಾರ್ಯದರ್ಶಿ ಅಥವಾ ಎರಡು ಇಲಾಖೆಗಳ ಕಾರ್ಯದರ್ಶಿಗಳು ಈ ಬಗ್ಗೆವಿವರಣೆ ನೀಡಲಿ. ಇಲ್ಲದಿದ್ದರೆ, ಸಂಪೂರ್ಣದಾಖಲೆಯೊಂದಿಗೆ ವಿಧಾನಸಭೆಯಲ್ಲಿ ಎಲ್ಲ ಬಹಿರಂಗಪಡಿಸುತ್ತೇನೆ ಎಂದು ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಹಾಸನದಲ್ಲೇ 1558 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇದ್ದು, ಪರಿಹಾರಕ್ಕೆ ರು.20.77 ಕೋಟಿ ಯೋಜನೆಯನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಕಳುಹಿಸಿ ಹಲವು ತಿಂಗಳಾಯಿತು.

ಅಲ್ಲದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೂ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಪತ್ರ ಬರೆದು ಯೋಜನೆ ಅನುಷ್ಠಾನಕ್ಕೆ ಕೋರಿದ್ದಾರೆ. ಆದರೆ, ಸಚಿವರು ಈವರೆಗೆ ಕ್ರಮ ಕೈಗೊಂಡಿಲ್ಲ ಎಂದು ರೇವಣ್ಣ ದೂರಿದರು.

ರಾಜ್ಯದಲ್ಲಿ ಎಲ್ಲ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆ ಇದ್ದು, ಮುಖ್ಯಮಂತ್ರಿಯವರು ಜಿಲ್ಲಾಧಿಕಾರಿ, ಸಿಇಒಗಳ ಸಭೆ ಕರೆದು ಮಾತುಕತೆ ನಡೆಸಬೇಕು. ಸೂಕ್ತ ಕ್ರಮಕ್ಕೆ ಆದೇಶಿಸಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT