ರಾಜಕೀಯ

ಮುಖ್ಯಮಂತ್ರಿ ಬ್ಲಾಕ್‍ಮೇಲ್‍ಗೆ ಯಾರೂ ಜಗ್ಗರು: ಈಶ್ವರಪ್ಪ

Srinivasamurthy VN

ಅರಸೀಕೆರೆ: ಅರ್ಕಾವತಿ ಡಿನೋಟಿಫಿಕೇಷನ್ ಹಗರಣದಿಂದ ತಪ್ಪಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರನ್ನು ಬ್ಲಾಕ್ ಮೇಲ್ ಮಾಡಿ ಬೆದರಿಸುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಈಶ್ವರಪ್ಪ ಆರೋಪಿಸಿದ್ದಾರೆ.

ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಸದಾನಂದಗೌಡರ ಆಡಳಿತಾವಧಿಯಲ್ಲಿ ನಡೆದ ಲೋಪದೋಷ ಪತ್ತೆಹಚ್ಚಲು ಸಿಎಂ ಸೂಚನೆ ನೀಡಿದ್ದಾರೆ. ಇದು ವಿಪಕ್ಷ ಮುಖಂಡರನ್ನು ಬೆದರಿಸುವ ತಂತ್ರವಲ್ಲದೆ ಬೇರೇನೂ ಅಲ್ಲ ಎಂದು ಟೀಕಿಸಿದರು.

ಕುತಂತ್ರ ರಾಜಕಾರಣ: ಇಂತಹ ಬೆದರಿಕೆಗಳಿಗೆ ಹೆದರುವ ಪ್ರಶ್ನೆ ಇಲ್ಲ. ಅಗತ್ಯ ದಾಖಲೆಗಳಿದ್ದರೆ ದೂರು ನೀಡಬಹುದು. ಅದನ್ನು ಬಿಟ್ಟು ಕುತಂತ್ರ ರಾಜಕಾರಣ ನಡೆಸಲು ಮುಂದಾದರೆ ತಕ್ಕ ಪ್ರಾಯಶ್ಚಿತ ಅನುಭವಿಸಬೇಕಾಗುತ್ತದೆ ಎಂದರು. ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಅನುಮತಿ ನೀಡಿದ ತಕ್ಷಣವೇ ಪಕ್ಷದ ನಿರ್ಣಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೋರಲಾಗುವುದು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.

SCROLL FOR NEXT