ಸಿದ್ದರಾಮಯ್ಯ 
ರಾಜಕೀಯ

ವಿಧಾನ ಪರಿಷತ್‌ ವಿಸರ್ಜನೆ ಇಲ್ಲ: ಸಿಎಂ ಸಿದ್ದರಾಮಯ್ಯ

ತೀವ್ರ ಚರ್ಚೆಗೆ ಕಾರಣವಾಗಿದ್ದ ವಿಧಾನ ಪರಿಷತ್ ಅನ್ನು ವಿಸರ್ಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ/ಸುವರ್ಣಸೌಧ: ತೀವ್ರ ಚರ್ಚೆಗೆ ಕಾರಣವಾಗಿದ್ದ ವಿಧಾನ ಪರಿಷತ್ ಅನ್ನು ವಿಸರ್ಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಇಂದು ವಿಧಾನ ಪರಿಷತ್‌ನಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ಅವರಿಗೆ ಮೇಲ್ಮನೆ ವಿಸರ್ಜನೆ ಬಗ್ಗೆ ನಿಮ್ಮ ಪಕ್ಷದಲ್ಲಿ ಚರ್ಚೆಯಾಗಿದೆಯೇ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಹೊರಟ್ಟಿ ನಮ್ಮ ಪಕ್ಷದಲ್ಲಿ ಚರ್ಚೆಯಾಗಿಲ್ಲ, ಅದು ಖಾಸಗಿ ನಿರ್ಣಯವಾದ್ದರಿಂದ ಮಂಡಿಸಲಾಗಿದೆ ಎಂದರು.

ಮೊದಲು ನಿಮ್ಮ ಪಕ್ಷದಲ್ಲಿ ಚರ್ಚಿಸಿ ಎಂದು ಸಿದ್ದರಾಮಯ್ಯ ಹೊರಟ್ಟಿ ಅವರಿಗೆ ಸಲಹೆ ನೀಡಿದರು. ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರು, ವಿಧಾನ ಪರಿಷತ್ ವಿಸರ್ಜಿಸುವ ಬಗ್ಗೆ ನಮ್ಮ ಪಕ್ಷದಲ್ಲಿ ಚರ್ಚೆಯಾಗಿದ್ದು, ವಿಸರ್ಜನೆ ಮಾಡಬಾರದು ಎಂದು ತೀರ್ಮಾನಿಸಿದ್ದೇವೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ನಾವೂ ವಿಸರ್ಜನೆ ಮಾಡಬಾರದು ಎಂದು ತೀರ್ಮಾನಿಸಿದ್ದೇವೆ ಎಂದರು.

ವಿಧಾನ ಪರಿಷತ್ ಅನ್ನು ವಿಸರ್ಜಿಸಬೇಕು ಎಂದು ನಿನ್ನೆ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ವಿಧಾನಸಭೆಯಲ್ಲಿ ಖಾಸಗಿ ನಿರ್ಣಯ ಮಂಡಿಸಿದ್ದರು. ಅಲ್ಲದೆ ರಹಸ್ಯ ಮತದಾನದ ಮೂಲಕ ನಿರ್ಣಯಕ್ಕೆ ಅನುಮೋದನೆ ಪಡೆಯುವಂತೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಮಾಡಿದ್ದರು.

ನಿರ್ಣಯ ಮಂಡಿಸಿ ಮಾತನಾಡಿದ್ದ  ಕೃಷ್ಣಪ್ಪ, ವಾರ್ಷಿಕ 300 ಕೋಟಿ ರೂ. ವೆಚ್ಚಕ್ಕೆ ಕಾರಣವಾಗಿ ರಾಜ್ಯ ಸರಕಾರದ ಪಾಲಿಗೆ ಬಿಳಿ ಆನೆಯಾಗಿರುವ ವಿಧಾನಪರಿಷತ್ತಿನಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಈ ಹಿಂದೆ ವಿಧಾನಪರಿಷತ್ತಿಗೆ ಇದ್ದ ಘನತೆ ಈಗಿಲ್ಲ. ಪ್ರಸ್ತುತ ಪರಿಷತ್ತು ಲ್ಯಾಂಡ್‌ ಮಾಫಿಯಾ, ಲಿಕ್ಕರ್‌ ಮಾಫಿಯಾ, ಮೆಡಿಕಲ್‌-ಎಂಜಿನಿಯರಿಂಗ್‌ ಕಾಲೇಜು ಸೀಟು ಮಾಫಿಯಾದವರಿಗೆ ಆಶ್ರಯ ನೀಡುವ "ರಾಜಕೀಯ ನಿರಾಶ್ರಿತರ ಶಿಬಿರ' ಆಗಿದೆ. ಹೀಗಾಗಿ, ರಾಜ್ಯದಲ್ಲಿ ಅದರ ಆವಶ್ಯಕತೆ ಇಲ್ಲ ಎಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT