ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಜೆಡಿಎಸ್ ಅವಿಶ್ವಾಸದ ಎಚ್ಚರಿಕೆ

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದಲ್ಲಿ ಸರ್ಕಾರದ ನಿಲುವಿನಿಂದ ಸಿಟ್ಟಿಗೆದ್ದಿರುವ ಪ್ರತಿಪಕ್ಷಗಳು ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧವೇ...

ಬೆಳಗಾವಿ/ಸುವರ್ಣಸೌಧ: ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದಲ್ಲಿ ಸರ್ಕಾರದ ನಿಲುವಿನಿಂದ ಸಿಟ್ಟಿಗೆದ್ದಿರುವ ಪ್ರತಿಪಕ್ಷಗಳು ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿವೆ.

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿದೆ. ಇದಕ್ಕೆ ಸಂಬಂಧಪಟ್ಟ ದಾಖಲೆಗಳು ತಮ್ಮ ಬಳಿ ಇವೆ. ಹೀಗಾಗಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸೋಣ ಎಂಬ ಆಹ್ವಾನವನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆಯುವ ಅಧಿವೇಶನದ ಮುಂದುವರಿದ ಕಲಾಪದಲ್ಲಿ ನಿರ್ಣಯ ಮಂಡನೆಗೆ ಅವಕಾಶ ಕೋರುವ ಸಾಧ್ಯತೆ ಇದೆ. ವಿಧಾನಸೌಧದ ಮೊಗಸಾಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ ಈ ವಿಷಯವನ್ನು ದೃಢೀಕರಿಸಿದ್ದು, ಈ ಪ್ರಕರಣದಲ್ಲಿ ಸರ್ಕಾರದ ಪಾತ್ರ ಇದೆ. ಇದರ ಜತೆ ಇನ್ನೂ ಹಲವು ವಿಚಾರಗಳು ಸೇರಿವೆ. ಹೀಗಾಗಿ ಅವಿಶ್ವಾಸ ನಿರ್ಣಯಕ್ಕೆ ನಿರ್ಧರಿಸಿದ್ದೇವೆ ಎಂದಿದ್ದಾರೆ.

ಇನ್ನು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಮಾಜಿ ಕಾನೂನು ಸಚಿವ ಎಸ್.ಸುರೇಶ್‌ಕುಮಾರ್ ಅವರ ಜತೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದೇನೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್