ಕೆ.ಜೆ. ಜಾರ್ಜ್ 
ರಾಜಕೀಯ

ಸಿಬಿಐಗೆ ಬೆಟ್ಟಿಂಗ್?

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿನ ಕ್ರಿಕೆಟ್ ಬೆಟ್ಟಿಂಗ್ ದಂಧೆ ಕುರಿತ ತನಿಖೆ ಯನ್ನು ಸಿಬಿಐಗೆ ವಹಿಸಲು ಸರ್ಕಾರ ಸಿದ್ಧವಿದೆ...

ವಿಧಾನಸೌಧ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿನ ಕ್ರಿಕೆಟ್ ಬೆಟ್ಟಿಂಗ್ ದಂಧೆ ಕುರಿತ ತನಿಖೆ ಯನ್ನು ಸಿಬಿಐಗೆ ವಹಿಸಲು ಸರ್ಕಾರ ಸಿದ್ಧವಿದೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಸುವರ್ಣ ನ್ಯೂಸ್-ಕನ್ನಡಪ್ರಭ ಬಯಲಿಗೆಳೆದಿದ್ದ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಕುರಿತು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಶುಕ್ರವಾರ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು. ಅದಕ್ಕೆ ಉತ್ತರಿಸಿದ ಸಚಿವ ಜಾರ್ಜ್, ಈಗಾಗಲೇ ಈ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.


ರಾಜ್ಯ ಸರ್ಕಾರ ಯಾರನ್ನೂ ರಕ್ಷಿಸುವ ಪ್ರಯತ್ನ ನಡೆಸಿಲ್ಲ. ರಾಜ್ಯಾದ್ಯಂತ ಈ ಹಗರಣದ ಜಾಲ ವ್ಯಾಪಿಸಿದ್ದು, ಈಗಾಗಲೇ ರಾಜ್ಯ ಸರ್ಕಾರ ಅಕ್ರಮ ಲಾಟರಿ ದಂಧೆ  ಹಾಗೂ ಓಸಿ ಮತ್ತು ಮಟ್ಕಾ ದಂಧೆಯ ಕುರಿತು ಸಿಬಿಐ ತನಿಖೆಗೆ ಆದೇಶಿಸಿದ್ದು, ನೀವು (ಪ್ರತಿಪಕ್ಷಗಳು) ಬಯಸಿದರೆ ಈ ಪ್ರಕರಣವನ್ನೂ ಸಿಬಿಐಗೆ ವಹಿಸಲು ಸಿದ್ಧ ಎಂದು ಘೋಷಿಸಿದರು. ವಿಷಯ ಪ್ರಸ್ತಾಪಿಸಿದ ಶೆಟ್ಟರ್, ಈ ಕುರಿತು ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವಂತೆ ಸ್ಪೀಕರ್ ಅವರನ್ನು ಕೋರಿದರು. ಹಗರಣ ಬಯಲಿಗೆಳೆದ ಸುವರ್ಣ ನ್ಯೂಸ್ ಸಿಬ್ಬಂದಿ ಮೇಲೆ ಪ್ರಕರಣ ದಾಖಲಿಸಿದ್ದನ್ನು ಖಂಡಿಸಿದ ಅವರು, ಸರ್ಕಾರವನ್ನು ತರಾಟೆಗೆ ತೆಗೆದು ಕೊಂಡರು. ಇಂತಹ ಪ್ರಕರಣ ಬಯಲಿಗೆಳೆದ ಸುವರ್ಣ ನ್ಯೂಸ್ ಚಾನೆಲ್ ಗೆ ಪ್ರೋತ್ಸಾಹ ನೀಡುವ ಬದಲು ರಾಜ್ಯ ಸರ್ಕಾರ ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು. ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ಈ ವಿಷಯದ ಮೇಲೆ ನಿಲುವಳಿ ಸೂಚನೆ ಮಂಡಿಸಲು ಅವಕಾಶ ಇಲ್ಲ. ಆದ್ರೆ, ಬೇರೆ ರೂಪದಲ್ಲಿ ಚರ್ಚೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT