ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ವಸತಿ ಸಚಿವ ಅಂಬರೀಶ್ ಸಾಧನೆ ಶೂನ್ಯ: ಸಿಎಂ

ವಸತಿ ಸಚಿವ ಅಂಬರೀಶ್ ಅವರ ಸಾಧನೆ ಶೂನ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ವಸತಿ ಸಚಿವ ಅಂಬರೀಶ್ ಅವರ ಸಾಧನೆ ಶೂನ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕ ಜಿ.ಎಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಇಂದು ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿದ ಸಿಎಂ, ಪ್ರಸಕ್ತ ಆಯವ್ಯಯಕ್ಕೆ ಸಂಬಂಧಿಸಿದಂತೆ ಅಂಬರೀಶ್ ಅವರ ಸಾಧನೆ ಶೂನ್ಯ ಎಂದು ಹೇಳಿದರು.

ವಿಧಾನಸಭೆಗೆ ಈ ವರ್ಷದ ಆಯವ್ಯಯದಲ್ಲಿ ನೀಡಿದ್ದ ಭರವಸೆಗಳ ಅನುಷ್ಠಾನದ ವಿವರ ನೀಡಿದ ಸಿದ್ದರಾಮಯ್ಯ, 2015-16ನೇ ಸಾಲಿನಲ್ಲಿ ವಸತಿ ಇಲಾಖೆಗೆ ನೀಡಿದ್ದ 3, 818 ಕೋಟಿ ರುಪಾಯಿ ಪೈಕಿ, ಒಂದೇ ಒಂದು ಪೈಸೆ ಖರ್ಚಾಗಿಲ್ಲ ಎಂದರು. ಅಲ್ಲದೆ ಮೇ ತಿಂಗಳ ಅಂತ್ಯದವರೆಗೂ ವಸತಿ ಇಲಾಖೆ ಯಾವುದೇ ವೆಚ್ಚ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಚಿಕ್ಕಮಗಳೂರು ಜಿಲ್ಲೆ ತರೀಕರೆ ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಭರವಸೆಗಳ ಅನುಷ್ಠಾನದ ವಿವರ ಸೇರಿದಂತೆ ಮೂರು ಪ್ರಶ್ನೆಗಳನ್ನು ಕೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ