ಪ್ರಹ್ಲಾದ್ ಜೋಶಿ ನನ್ನ ನಡುವೆ ಮನಸ್ತಾಪ ಇಲ್ಲ: ಬಿಎಸ್‌ವೈ
ನನ್ನ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ...
ಶಿವಮೊಗ್ಗ: ನನ್ನ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
ರೈತರ ಆತ್ಮಹತ್ಯೆ ಸಂಬಂಧ ಬಿಜೆಪಿ ಮುಖಂಡರ ಹೋರಾಟದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಬಿಎಸ್‌ವೈ, ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಶಕ್ತಿ ಮೀರಿ ಹೋರಾಟ ನಡೆಸುತ್ತಿದೆ ಎಂದರು.
ಇನ್ನು ರೈತರ ಮನೆಗೆ ಭೇಟಿ ನೀಡುವ ಬಿಜೆಪಿ ನಾಯಕರ ತಂಡದಿಂದ ತಮ್ಮನ್ನು ಕೈಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ನಾನು ಲೋಕಸಭೆ ಅಧಿವೇಶನದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ತಂಡದಲ್ಲಿ ನಾನಿಲ್ಲ ಎಂದರು.
ಈಗಾಗಲೇ ನಾನು ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಭೇಟಿ ನೀಡುತ್ತಿದ್ದೇನೆ. ಮಂಡ್ಯ ಜಿಲ್ಲೆಗೆ ಭೇಟಿ ನೀಡದ್ದೇನೆ. ಇಂದೂ ಸಹ ನಾನು ದಾವಣೆಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಗ್ರಾಮದ ರೈತನ ಮನೆಗೆ ಭೇಟಿ ನೀಡುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.