ಎಸ್.ಎಂ.ಕೃಷ್ಣ 
ರಾಜಕೀಯ

ರೈತರಲ್ಲಿ ಇನ್ನಷ್ಟು ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕು: ಎಸ್.ಎಂ.ಕೃಷ್ಣ

ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರು ಶನಿವಾರ ಹೇಳಿದ್ದಾರೆ.

ಮಂಡ್ಯ: ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರು ಶನಿವಾರ ಹೇಳಿದ್ದಾರೆ.

ಇಂದು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ದೊಡ್ಡಕ್ಯಾತನಹಳ್ಳಿಯ ಮೃತ ರೈತನ ಮನೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣ, ರೈತರ ಆತ್ಮಹತ್ಯೆ ತಡೆಯುವಲ್ಲಿ ಮತ್ತು ಆತ್ಮಸ್ಥೈರ್ಯ ತುಂಬುವಲ್ಲಿ ನನ್ನದೊಂದು ಸಣ್ಣ ಪ್ರಯತ್ನ ಅಷ್ಟೆ. ರೈತರಲ್ಲಿ ಇನ್ನಷ್ಟು ಆತ್ಮಸ್ಥೈಯ ತುಂಬುವ ಕೆಲಸವಾಗಬೇಕು ಎಂದರು.

2 ದಿನಗಳ ಪ್ರವಾಸದಲ್ಲಿ ರೈತರ ಸಂಕಷ್ಟದ ಬಗ್ಗೆ ತಿಳಿದಿರುವೆ. ಆದರೆ ಜಾಗೃತಿ ಮೂಡಿಸಿದರೂ ರೈತರ ಆತ್ಮಹತ್ಯೆ ಮುಂದುವರೆದಿರುವುದು ಒಂದು ದೊಡ್ಡ ದುರಂತ ಎಂದು ಮಾಜಿ ಸಿಎಂ ಹೇಳಿದ್ದಾರೆ.

ಇದೇ ವೇಳೆ ತಮ್ಮ ಪ್ರವಾಸದಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ ಎಂಬ ಮಾತುಗಳನ್ನು ತಳ್ಳಿಹಾಕಿದ ಕೃಷ್ಣ, ನನ್ನಿಂದ ಸರ್ಕಾರ ಎಚ್ಚೆತ್ತುಕೊಂಡಿದೆ ಎನ್ನುವುದು ತಪ್ಪು. ರಾಜ್ಯ ಸರ್ಕಾರಕ್ಕೆ ಅದರದ್ದೇ ಆದ ಜವಾಬ್ದಾರಿ ಇರುತ್ತದೆ ಎಂದಿದ್ದಾರೆ. ಅಲ್ಲದೆ ತಮ್ಮ ಪ್ರವಾಸದಿಂದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ಅವರಿಗೆ ಯಾವುದೇ ಹಿನ್ನಡೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರು ನಿನ್ನೆಯಿಂದ ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಭೇಟಿ, ಸಾಂತ್ವನ ಹೇಳುವ ಮೂಲಕ ಕಾಂಗ್ರೆಸ್‌ನಲ್ಲಿ ಆಂತರಿಕ ಸಂಚಲನ ಉಂಟುಮಾಡಿದ್ದಾರೆ.

ಎಸ್.ಎಂ.ಕೃಷ್ಣ   ಅವರು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ 16 ರೈತರ ಮನೆಗೆ ತೆರಳಿ ತಲಾ ರು. 50 ಸಾವಿರ ಪರಿಹಾರವನ್ನು ನೀಡಿರುವುದು ಸರ್ಕಾರ ಮತ್ತು ಪಕ್ಷದಲ್ಲಿ ಚಟುವಟಿಕೆ ಮೂಡಿಸುವುದಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video