ರಾಜಕೀಯ

ಶಾಲಾ ವಾಹನಗಳ ಮೇಲೆ ಕ್ರಮಕ್ಕೆ ಸಿಬ್ಬಂದಿ ಕೊರತೆ

Srinivas Rao BV

ಬೆಂಗಳೂರು: ನಿಯಮ ಉಲ್ಲಂಘಿಸಿ ಮಕ್ಕಳನ್ನು ಶಾಲೆಗೆ ಹೊತ್ತೊಯ್ಯುವ ಶಾಲಾ ವಾಹನಗಳ ಮೇಲೆ ವ್ಯಾಪಕವಾಗಿ ಕ್ರಮ ಕೈಗೊಳ್ಳಲು ಸಿಬ್ಬಂದಿ ಕೊರತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯೆ ವಿಮಲಾಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರು ಸೇರಿದಂತೆ ಇತರೆ ನಗರಗಳಲ್ಲಿ ಶಾಲಾ ಮಕ್ಕಳ ಸುರಕ್ಷತೆಗೆ ನಿಗದಿಪಡಿಸಿರುವ ವಾಹನಗಳು ಮಕ್ಕಳ ಸುರಕ್ಷತೆಗೆ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಪರಿಪೂರ್ಣವಾಗಿ ಪಾಲಿಸುತ್ತಿಲ್ಲ ಎಂಬುದು ಸರ್ಕಾರದ ಗಮನದಲ್ಲಿದೆ. ನಿಯಮ ಪಾಲಿಸಿದವರ ವಿರುದ್ಧ ಪೊಲೀಸ್ ಇಲಾಖೆ ಸಹಯೋಗದಲ್ಲಿ ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಸುರಕ್ಷತಾ ನಿಯಮಗಳನ್ನು ಪಾಲಿಸದೆ ನಿಬಂಧನೆ ಉಲ್ಲಂಘಿಸಿ ಸಂಚರಿಸುವ ವಾಹನಗಳ ತಪಾಸಣೆ ನಡೆಸಿದ್ದು 849 ಶಾಲಾ ವಾಹನ ಪತ್ತೆ ಹಚ್ಚಲಾಗಿದ್ದು, 4 24 500  ದಂಡ ವಸೂಲಿ ಮಾಡಲಾಗಿದೆ ಎಂದರು.

SCROLL FOR NEXT