ವಜುಭಾಯಿ ವಾಲಾ - ಎಚ್ ಡಿ. ದೇವೇಗೌಡ 
ರಾಜಕೀಯ

ರೈತರ ಆತ್ಮಹತ್ಯೆ, ಲೋಕಾ ಭ್ರಷ್ಟಾಚಾರ: ದೇವೇಗೌಡರಿಂದ ರಾಜ್ಯಪಾಲರ ಭೇಟಿ

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶುಕ್ರವಾರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ್ದಾರೆ.

ಇಂದು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿದ ದೇವೇಗೌಡರು, ರಾಜ್ಯದಲ್ಲಿ ಮುಂದುವರೆದ ರೈತರ ಸರಣಿ ಆತ್ಮಹತ್ಯೆ, ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ಬಿಬಿಎಂಪಿ ವಿಭಜನೆ ಸಂಬಂಧ ಸರ್ಕಾರ ಅಂಗೀಕರಿಸಿರುವ ನಗರಾಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಸಹಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಬಿಬಿಎಂಪಿ ವಿಭಜನೆಗೆ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಉಭಯ ಪಕ್ಷಗಳು, ಕರ್ನಾಟಕ ನಗರಾಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಸಹಿ ಹಾಕದಂತೆ ಮನವಿ ಮಾಡಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!