ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

ಸಿದ್ದರಾಮಯ್ಯ ಲೂಟಿ ನಿಲ್ಲಿಸಲಿ: ಕುಮಾರಸ್ವಾಮಿ

ಹಿಂದಿನ ಸರ್ಕಾರಗಳು ಮಾಡಿದ ಸಾಲ ಭಾರ ನನ್ನ ಮೇಲೆ ಬಿದ್ದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಳುವ ಬದಲು ಲೂಟಿ ಹೊಡೆಯುವುದನ್ನು ನಿಲ್ಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ...

ಬೆಂಗಳೂರು: ಹಿಂದಿನ ಸರ್ಕಾರಗಳು ಮಾಡಿದ ಸಾಲ ಭಾರ ನನ್ನ ಮೇಲೆ ಬಿದ್ದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಳುವ ಬದಲು ಲೂಟಿ ಹೊಡೆಯುವುದನ್ನು ನಿಲ್ಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಸದಾಶಿವನಗರದಲ್ಲಿರುವ ತಮ್ಮ ಅತಿಥಿಗೃಹ ದಲ್ಲಿ ಸುದ್ದಿಗಾರರ ಜತೆ ಭಾನುವಾರ ಮಾತನಾ ಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರೈತರ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಲಘುವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ದೆಹಲಿಯ ಜಂತರ್ ಮಂತರ್
ನಲ್ಲಿ ಸೋಮವಾರ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಜೆಡಿಎಸ್‍ನ ಎಲ್ಲ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಜತೆ ನಾನೂ ಭಾಗವಹಿಸುತ್ತೇನೆ ಎಂದರು.

ಆತ್ಮಹತ್ಯೆಗೆ ಇಸ್ಪೀಟೂ ಕಾರಣ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡುತ್ತಿವೆ. ರೈತರ ಆತ್ಮಹತ್ಯೆಗೆ ಪ್ರೇಮ ಪ್ರಕರಣ ಹಾಗೂ ನಪುಂಸಕತ್ವ ಕಾರಣ
ಎಂದು ಹೇಳುವ ಮೂಲಕ ಕೇಂದ್ರ ಕೃಷಿ ಸಚಿವರು ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ತಾಲೂಕು ಕೇಂದ್ರಗಳಲ್ಲಿ ಇಸ್ಪೀಟ್ ಕ್ಲಬ್ ಆರಂಭವಾಗಿದೆ. ರಾಜಕೀಯ ಉದ್ದೇಶಕ್ಕಾಗಿ ಸರ್ಕಾರವೇ ಇದಕ್ಕೆ ಪ್ರೇರಣೆ ನೀಡುತ್ತಿದೆ. ರೈತರ ಆತ್ಮಹತ್ಯೆಗೆ ಇದು ಕೂಡಾ ಕಾರಣ. ಹಿಂದಿನ ಸರ್ಕಾರದ ಸಾಲದ ಹೊರೆ ನನ್ನ ತಲೆಯ ಮೇಲಿದೆ ಎಂದು ಸಿದ್ದರಾಮಯ್ಯ ಅಳುತ್ತಿದ್ದಾರೆ. ಈ ರೀತಿ ಅಳುವುದನ್ನು ಬಿಟ್ಟು ರಾಜ್ಯವನ್ನು ಲೂಟಿ ಡೆಯುವುದನ್ನು ನಿಲ್ಲಿಸಿ. ನಗರೋತ್ಥಾನಕಾರ್ಯಕ್ರಮದ ಹೆಸರಿನಲ್ಲಿ ಸಿದ್ದರಾಮಯ್ಯನವರು ಹಣ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ನಾಯಕರು ಇಲ್ಲಿ ಹೇಳಿಕೆ ಕೊಡುವುದನ್ನು ಬಿಟ್ಟು ಮೊದಲು ದೆಹಲಿಗೆ ಹೋಗಲಿ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಂಡು ರೈತರ ಸಮಸ್ಯೆಗೆ ಪರಿಹಾರ ದೊರಕಿಸಲಿ. ಅದನ್ನು ಬಿಟ್ಟು ಇಲ್ಲಿ 6 ತಂಡಗಳಲ್ಲಿ ರೈತರ ಮನೆಗೆ ಹೋಗುವ ನಾಟಕ ಬಿಡಿ ಎಂದು ಆಗ್ರಹಿಸಿದರು. ಜಿಲ್ಲಾ ಕೇಂದ್ರಗಳಲ್ಲೂ ಉಪವಾಸ: ದೇವೇ ಗೌಡರು ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸುತ್ತಿದ್ದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸುತ್ತಾರೆ. ನಾನು ಮುಂದಿನ ತಿಂಗಳು ಚಾಮರಾಜನಗರದಿಂದ ಬೀದರ್‍ವರೆಗೆ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಪಾದಯಾತ್ರೆ ನಡೆಸುತ್ತೇನೆ. ಅಲ್ಲಿಯವರೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರ ಭೇಟಿ ಮುಕ್ತಾಯಗೊಳ್ಳಲಿ ಎಂದರು.

ರೈತರ ಬಡ್ಡಿ, ಸುಸ್ತಿ ಬಡ್ಡಿಯನ್ನು ರಾಜ್ಯ ಸರ್ಕಾರವೇ ತೀರಿಸಬೇಕು. ಈ ಸಂಬಂಧ ಕೇಂದ್ರ ಸರ್ಕಾರದತ್ತ ಮುಖ ಮಾಡುವ ಬದಲು ಸಿದ್ದರಾಮಯ್ಯನವರೇ ಮನ್ನಾ ಮಾಡಿ ರೈತರಲ್ಲಿ
ಭರವಸೆ ಮೂಡಿಸಲಿ. ಸಹಕಾರ ಬ್ಯಾಂಕ್‍ಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಿಂದ ಈಗಲೂ ರೈತರಿಗೆ ನೋಟಿಸ್ ಕಳುಹಿಸಲಾಗುತ್ತಿದೆ. ಆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಕುಮಾರಸ್ವಾಮಿ ಆಪಾದಿಸಿದರು. ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ ಹಿನ್ನೆಲೆಯಲ್ಲಿ ಸರ್ಕಾರ ಕಾಟಾಚಾರಕ್ಕೆ ಕಾಯ್ದೆಗೆ ತಿದ್ದುಪಡಿ ತರುತ್ತಿದೆ. ಈ ಸಂಬಂಧ ಎಲ್ಲ ಚರ್ಚೆಗಳೂ ಮುಕ್ತಾಯಗೊಂಡಿದೆ. ಲೋಕಾಯುಕ್ತಕ್ಕೆ ನಗೆಪಾಟಲಿನ ತಿದ್ದುಪಡಿ ತಂದಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ