ಬೆಂಗಳೂರು: ಭೂಸ್ವಾಧೀನ ವಿಧೇಯಕದ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಕರೆದಿದ್ದ ಸಭೆ ಮುಂದೂಡುವ ಸಾಧ್ಯತೆ ಇದ್ದು, ಸಿಎಂ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸ ರದ್ದಾಗುವ ಸಂಭವ ಇದೆ. ವಿಧೇಯಕದ ಬಗ್ಗೆ ಚರ್ಚೆ ನಡೆಸಲು ಎಲ್ಲ ರಾಜ್ಯದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯನ್ನು ಜೂನ್ 5ರಂದು ಎಐಸಿಸಿ ಆಯೋಜಿಸಿತ್ತು. ಆದರೆ, ಕಾರಣಾಂತರಗಳಿಂದ ಸಭೆ ಮುಂದೂಡಲ್ಪಡಲಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಪ್ರವಾಸ ರದ್ದಾಗಲಿದೆ.