ಬಿಜೆಪಿ ಆರ್ ಎಸ್ ಎಸ್ ಗೆ ಆರ್ ಜೆಡಿ- ಆರ್ ಜೆಡಿ ಮೈತ್ರಿ ಬಗ್ಗೆ ಹೆಚ್ಚು ಚಿಂತೆ
ಹಾರ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಯು-ಆರ್ ಜೆಡಿ ಮೈತ್ರಿಯಿಂದ ತಾವು ಸೋಲುತ್ತೇವೆ ಎನ್ನುವ ಭಯದಿಂದ ಬಿಜೆಪಿ ಮತ್ತು ಆರ್ ಎಸ್ ಎಸ್ ಗೆ ಚಿಂತೆ ಶುರುವಾಗಿದೆ ..
ಪಾಟ್ನಾ: ಬಿಹಾರ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಯು-ಆರ್ ಜೆಡಿ ಮೈತ್ರಿಯಿಂದ ತಾವು ಸೋಲುತ್ತೇವೆ ಎನ್ನುವ ಭಯದಿಂದ ಬಿಜೆಪಿ ಮತ್ತು ಆರ್ ಎಸ್ ಎಸ್ ಗೆ ಚಿಂತೆ ಶುರುವಾಗಿದೆ ಎಂದು ಆರ್ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ವ್ಯಂಗ್ಯವಾಡಿದ್ದಾರೆ.
ಚುನಾವಣೆಯಲ್ಲಿ ಸೋಲುವ ಭೀತಿ ಈಗಾಗಲೇ ಬಿಜೆಪಿ ಆರ್ ಎಸ್ ಎಸ್ ಮಾಯಕರ ಮನದಲ್ಲಿ ಮನೆ ಮಾಡಿದೆ. ಹೀಗಾಗಿ ಮೈತ್ರಿ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿದ್ದಾರೆ ಎಂದು ಲಾಲೂ ಪ್ರಸಾದ್ ಯಾದವ್ ಸಾಮಾಜಿಕ ಜಾಲ ತಾಣದಲ್ಲಿ ಬರೆದುಕೊಂಡಿದ್ದಾರೆ.
ಜನತಾ ಪರಿವಾರ ಮತ್ತೆ ಒಗ್ಗೂಡಿನ ನಂತರದ ಬೆಳವಣಿಗೆಗೆಳ ಬಗ್ಗೆ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಲಾಲೂ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಇನ್ನು ಎರಡು ಪಕ್ಷಗಳ ಮೈತ್ರಿ ಅಭ್ಯರ್ಥಿಗಳು 243 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.