ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ 
ರಾಜಕೀಯ

ಕಾವೇರಿ ವಿವಾದ ನಿರ್ಲಕ್ಷಿಸಬೇಡಿ: ಎಚ್ ಡಿ ದೇವೇಗೌಡ ಎಚ್ಚರಿಕೆ

ತಮಿಳುನಾಡು ರಾಜ್ಯದೊಂದಿಗೆ ದಶಕಗಳಿಂದ ಇರುವ ಕಾವೇರಿ ವಿವಾದವನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.

ಬೆಂಗಳೂರು: ತಮಿಳುನಾಡು ರಾಜ್ಯದೊಂದಿಗೆ ದಶಕಗಳಿಂದ ಇರುವ ಕಾವೇರಿ ವಿವಾದವನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.

ಬೆಂಗಳೂರಿನ ಲಗ್ಗೆರೆಯ ಮುನೇಶ್ವರ ಬಡಾವಣೆಯಲ್ಲಿ ಜೆಡಿಎಸ್ ಮುಖಂಡ ಚಂದ್ರಶೇಖರ್ ಅವರು ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಿದ್ದ ಸಂಚಾರಿ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದೇವೇಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ವೇಳೆ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಕುಡಿಯುವ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಏಕೆ ಎಂಬ ನಿರ್ಲಕ್ಷ್ಯ ಮನೋಭಾವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದ್ದಾರೆ. ಆದರೆ, ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಮುಂದೆ ಏನಾಗಬಹುದೋ ಎಂಬ ಆತಂಕ ನನ್ನನ್ನು ಕಾಡುತ್ತಿದೆ ಎಂದು ತಮ್ಮ ಆತಂಕ ವ್ಯಕ್ತ ಪಡಿಸಿದರು.

"ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ 2007ರಲ್ಲಿ ಕಾವೇರಿ ನ್ಯಾಯಾಧೀಕರಣದ ತೀರ್ಪು ಬಂದಿದೆ. ಒಟ್ಟು ಮೂರನೇ ಎರಡು ಭಾಗದಷ್ಟು ನೀರನ್ನು ಬೆಂಗಳೂರಿಗೆ ಹಂಚಿಕೆ ಮಾಡಲಾಗಿಲ್ಲ. ನ್ಯಾಯಾಧೀಕರಣದ ತೀರ್ಪಿನಿಂದ ಆಗುವ ಅನಾಹುತಗಳ ಬಗ್ಗೆ ಎಚ್ಚೆತ್ತುಕೊಂಡ ನಾನು ಸುಪ್ರೀಂಕೋರ್ಟ್‌ಗೆ ವಿಶೇಷ ತಕರಾರು ಅರ್ಜಿ ಹಾಕಿಸಿದ್ದೇನೆ. ಹೈತೀರ್ಪು ನೀಡಿದ್ದ ನ್ಯಾಯಾಧೀಕರಣದಿಂದಲೂ ಸಣ್ಣ ಪ್ರಮಾಣದ ಸ್ಪಷ್ಟೀಕರಣ ಕೇಳಲಾಗಿದೆ".

"ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಕುರಿತು  ನಿರ್ಲಕ್ಷ್ಯತೆಯಿಂದ ಇದ್ದಾರೆ. ಮುಂದಿನ ದಿನಗಳಲ್ಲಿ ನ್ಯಾಯಾಲಯಗಳ ತೀರ್ಪು ಆಧರಿಸಿ ನೀರನ್ನು ಅಳತೆ ಮಾಡಿ ಹಂಚುತ್ತಾರೆ. ಆಗ ಅನ್ಯಾಯದ ಅರಿವು ಸರ್ಕಾರಕ್ಕಾಗಲಿದೆ. ಈಗಲೇ ಎಚ್ಚೆತ್ತುಕೊಳ್ಳದೇ ಇದ್ದರೆ ಮುಂದಿನ ದಿನಗಳಲ್ಲಿ ನೀರಿಗಾಗಿ ರಾಜ್ಯ-ರಾಜ್ಯಗಳ, ದೇಶ-ದೇಶಗಳ ನಡುವೆ ಯುದ್ಧ ನಡೆಯಲಿದೆ" ಎಂದು ದೇವೇಗೌಡ ಅವರು ಮುನ್ನೆಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ