ರಾಜಕೀಯ

ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜತೆ ಚರ್ಚೆ: ಸಿಎಂ

Lingaraj Badiger

ಮೈಸೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನಿರ್ದೇಶಕರ ನೇಮಕಕ್ಕೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಜತೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ದೆಹಲಿಯಲ್ಲಿ ಮಂಗಳವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ನಾನೂ ಭಾಗವಹಿಸುತ್ತಿದ್ದೇನೆ. ಮುಖ್ಯಮಂತ್ರಿಗಳ ಸಭೆಯಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಪ್ರಸ್ತಾಪಿಸುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಸಭೆಯ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿ ನೇಮಕ ಸಂಬಂಧಿಸಿದಂತೆ ಚರ್ಚಿಸಲು ಸಮಯ ಕೇಳುತ್ತೇನೆ. ಹೈಕಮಾಂಡ್ ಸಮಯ ನೀಡಿದರೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

ಈಗಾಗಲೇ ಎಲ್ಲ ನಿಮಗ ಮಂಡಳಿಗಳಿಗೂ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಿಸಲಾಗಿದ್ದು, ನಿರ್ದೇಶಕರ ನೇಮಕ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಿಂದ ಬಂದ ನಂತರ ನಿಗಮ ಮಂಡಳಿಗಳ ನಿರ್ದೇಶಕರ ಆಯ್ಕೆ ಹಾಗೂ ಖಾಲಿ ಇರುವ ಐದಾರು ಅಭಿವೃದ್ಧಿ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗುವುದು ಎಂದು ಹೇಳಿದರು.

SCROLL FOR NEXT