ಅಮರಾವತಿ ಚಂದ್ರಶೇಖರ್ ಮತ್ತು ಜೆಡಿಎಸ್ ಮುಖಂಡ ಕುಮಾರಸ್ವಾಮಿ 
ರಾಜಕೀಯ

ಕುಮಾರಸ್ವಾಮಿ ಭೇಟಿ ಮಾಡಿದ ಅಂಬಿ ಆಪ್ತ ಅಮರಾವತಿ ಚಂದ್ರಶೇಖರ್

ಸಚಿವ ಅಂಬರೀಶ್ ಅವರ ಆಪ್ತ ಎಂದೇ ಗುರುತಿಸಿಕೊಂಡಿರುವ ಅಮರಾವತಿ ಚಂದ್ರಶೇಖರ್‌ ಅವರು ಮಂಗಳವಾರ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ...

ಬೆಂಗಳೂರು: ವಸತಿ ಸಚಿವ ಹಾಗೂ ಮಂಡ್ಯ ಉಸ್ತುವಾರಿ ಸಚಿವ ಅಂಬರೀಶ್ ಅವರ ಆಪ್ತ ಎಂದೇ ಗುರುತಿಸಿಕೊಂಡಿರುವ ಅಮರಾವತಿ ಚಂದ್ರಶೇಖರ್‌ ಅವರು ಮಂಗಳವಾರ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರ ಸಂಜೆ ನಗರದ ಅಜ್ಞಾತ ಸ್ಥಳವೊಂದರಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಅಮರಾವತಿ ಚಂದ್ರಶೇಖರ್ ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಘಟನೆ ಇದೀಗ ಮಂಡ್ಯ ಕಾಂಗ್ರೆಸ್ ತೀವ್ರ ಸಂಚಲನ ಉಂಟುಮಾಡಿದ್ದು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡ ಅಮರಾವತಿ ಚಂದ್ರಶೇಖರ್ ಮಂಡ್ಯ ಕಾಂಗ್ರೆಸ್ ವಲಯದಲ್ಲಿ ಮಾತ್ರವಲ್ಲ, ಒಟ್ಟಾರೆ ಕಾಂಗ್ರೆಸ್ ಪಾಳಯದಲ್ಲಿಯೇ ಸಂಚಲನ ಮೂಡಿಸಿದ್ದಾರೆ.

ಮೂಲಗಳ ಪ್ರಕಾರ ಇಬ್ಬರೂ ನಾಯಕರು ಮಂಡ್ಯ ನಗರಸಭೆ ಅಧ್ಯಕ್ಷರ ಆಯ್ಕೆ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಭೇಟಿ ಕುರಿತು ರಾಜ್ಯ ಕಾಂಗ್ರೆಸ್ ನ ಯಾವೊಬ್ಬ ನಾಯಕರಿಗೂ ಮಾಹಿತಿ ನೀಡದಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಇದು ಕೆಲ ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೂ ಕಾರಣವಾಗಿದೆ. ಭೇಟಿ ವೇಳೆ ಶಾಸಕ ಚೆಲುವರಾಯಸ್ವಾಮಿ ಸೇರಿದಂತೆ ಕೆಲ ಜೆಡಿಎಸ್ ಪಕ್ಷದ ಕೆಲ ಮುಖಂಡರು ಕೂಡ ಉಪಸ್ಥಿತರಿದ್ದರು.

ಮಂಡ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಎರಡು ಬಣ ನಿತ್ಯ ತಿಕ್ಕಾಟ ನಡೆಸುತ್ತಿದ್ದು, ಈ ಭೇಟಿ ಜಿಲ್ಲೆಯಲ್ಲಿ ಇನ್ನಷ್ಟು ಗೊಂದಲ, ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT