ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಸೋಮವಾರ ವಜಾಗೊಳಿಸಿದೆ. ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಗದಿತ ಕಾಲಾವಕಾಶದಲ್ಲೇ ಚುನಾವಣೆ ನಡೆಸಬೇಕೆಂದು ಸೂಚಿಸಿದೆ. ಇದರಿಂದಾಗಿ ರಾಜ್ಯ ಸರ್ಕಾರ ತೀವ್ರ ಮುಖಭಂಗಕ್ಕೊಳಗಾಗಿದೆ.
ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಹೈಕೋರ್ಟ್ ಮಾರ್ಪಡಿಸುವಂತಿಲ್ಲ ಎಂದು ಹೈಕೋರ್ಟ್ ಪೀಠದ ನ್ಯಾ.ಬಿ.ವಿ.ನಾಗರತ್ನ ಅಭಿಪ್ರಾಯವ್ಯಕ್ತಪಡಿಸಿದ್ದು, ನಿಗದಿತ ಸಮಯದಲ್ಲೇ, 2001ರ ಮೀಸಲಾತಿಯಂತೆ ಚುನಾವಣೆ ನಡೆಸಲು ನಿರ್ದೇಶನ ನೀಡಿದ್ದಾರೆ.
ಅದೇ ವೇಳೆ ಸುಪ್ರೀಂ ತೀರ್ಪಿನ ವಿರುದ್ಧ ಮಧ್ಯಂತರ ಅರ್ಜಿ ಸಲ್ಲಿಸಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪೀಠ ರು. 10,000 ದಂಡ ವಿಧಿಸಿ, ಸುಪ್ರೀಂಕೋರ್ಟ್ ಸೂಚನೆಯಂತೆ ಆಗಸ್ಟ್ 5ರೊಳಗೆ ಚುನಾವಣೆ ನಡೆಸಿ ಎಂದು ಆದೇಶಿಸಿದೆ.