ಮಾಜಿ ಡಿಸಿಎಂ, ಶಾಸಕ ಆರ್. ಅಶೋಕ್ 
ರಾಜಕೀಯ

ಚುನಾವಣೆ ಮುಂದೂಡಿಕೆಗೆ ಈಗಲೂ ಯತ್ನ: ಅಶೋಕ್

ಸರ್ಕಾರ ತನ್ನ ಭಂಡತನ ಮತ್ತು ಚೇಷ್ಟೆ ಬಿಟ್ಟು ಬಿಬಿಎಂಪಿ ಚುನಾವಣೆ ನಡೆಸಬೇಕು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಹೋಗುವುದು ಸರಿಯಲ್ಲ ಎಂದು ಮಾಜಿ ಡಿಸಿಎಂ, ಶಾಸಕ ಆರ್. ಅಶೋಕ್ ಸಲಹೆ ನೀಡಿದ್ದಾರೆ...

ಬೆಂಗಳೂರು: ಸರ್ಕಾರ ತನ್ನ ಭಂಡತನ ಮತ್ತು ಚೇಷ್ಟೆ ಬಿಟ್ಟು ಬಿಬಿಎಂಪಿ ಚುನಾವಣೆ ನಡೆಸಬೇಕು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಹೋಗುವುದು ಸರಿಯಲ್ಲ ಎಂದು ಮಾಜಿ ಡಿಸಿಎಂ, ಶಾಸಕ ಆರ್. ಅಶೋಕ್ ಸಲಹೆ ನೀಡಿದ್ದಾರೆ.

ನಗರದ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮೋರ್ಚಾ ಹಮ್ಮಿಕೊಂಡಿದ್ದ ಜಗನ್ನಾಥರಾವ್ ಜೋಶಿ ಅವರ ಜನ್ಮದಿನ ಹಾಗೂ ಶ್ಯಾಮಪ್ರಸಾದ್ ಮುಖರ್ಜಿಯವರ 62ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿಬಿಎಂಪಿ ಚುನಾವಣೆ ಮುಂದೂಡಲು ಪ್ರಯತ್ನಿಸುತ್ತಿದೆ, ಬೆಂಗಳೂರಿಗರ ಮತದಾನದ ಹಕ್ಕನ್ನು ಕಸಿವ ಪ್ರಯತ್ನ ನಡೆಯುತ್ತಿದೆ, ಇದಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದರು.

ಇಷ್ಟು ದಿನ ಸಿದ್ದರಾಮಯ್ಯ ಅವರು ಮೈಸೂರಿಗೆ ಸಿಎಂ ಆಗಿದ್ದರೋ ಅಥವಾ ರಾಜ್ಯಕ್ಕೆ ಸಿಎಂ ಆಗಿದ್ದರೋ ಗೊತ್ತಿಲ್ಲ. ಕಳೆದ ಎರಡು ವರ್ಷದಿಂದ ಬೆಂಗಳೂರಿನ ನೆನಪಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬೆಂಗಳೂರು ಸುತ್ತಬೇಕೆನಿಸಲು ಶುರುವಾಗಿದೆ ಎಂದು ಲೇವಡಿ ಮಾಡಿದರು. ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಬಲಗೈ ಎತ್ತಿ ಹೇಳುವ ಸಿಎಂ ಸಿದ್ದರಾಮಯ್ಯ, ಒತ್ತುವರಿಯನ್ನು ಸಕ್ರಮಗೊಳಿಸುತ್ತೇವೆ ಎಂದು ಎಡಗೈ ಎತ್ತಿ ಹೇಳುತ್ತಾರೆ. ಜನರಿಗೆ ಈಗಾಗಲೇ ಸರ್ಕಾರದ ಮೇಲೆ ನಂಬಿಕೆ ಹೊರಟು ಹೋಗಿದೆ. ಹೀಗಾಗಿಯೇ ಬಿಬಿಎಂಪಿ ಚುನಾವಣೆ ಎದುರಿಸುವ ಧೈರ್ಯವಿಲ್ಲ ಎಂದು ಮಾಜಿ ಡಿಸಿಎಂ ಅಶೋಕ ಲೇವಡಿ ಮಾಡಿದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಸಿ. ಸುರಾನಾ, ನಗರ ಘಟಕದ ಅಧ್ಯಕ್ಷ ಸುಬ್ಬನರಸಿಂಹ, ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು, ಚಿ.ನಾ.ರಾಮು ಮುಂತಾದವರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!