ಲಕ್ಷ್ಮೀಶ್ವರ: ರಾಜ್ಯ ಸರ್ಕಾರ ನನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿದೆ. ಇಲ್ಲಸಲ್ಲದ ಆರೋಪ ಹೊರಿಸಲು ಪ್ರಯತ್ನಿಸುತ್ತಿದೆ. ಆದರೆ ಯಾವುದೇ ಷಡ್ಯಂತ್ರಕ್ಕೂ ನಾನು ಹೆದರುವುದಿಲ್ಲ
ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ರಾಜ್ಯದಲ್ಲಿ ಕೊಲೆ, ಸುಲಿಗೆಗಳು ಹೆಚ್ಚಾಗುತ್ತಿವೆ. ವಿನಾ ಕಾರಣ ಅಮಾಯಕ ಜನರಿಗೆ ತೊಂದರೆ ನೀಡುವ ಪ್ರವೃತ್ತಿ ಬೆಳೆಯುತ್ತಿದ್ದು, ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಡಿನೋಟಿಫೈ ಮಾಡುವುದು ತಪ್ಪಲ್ಲ. ಹಿಂದಿನ ಎಲ್ಲ ಮುಖ್ಯಮಂತ್ರಿಗಳು ಇದನ್ನೇ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯ ಸರ್ಕಾರ ನನ್ನ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ. ಆದರೆ ಇದಕ್ಕೆ ನಾನು ಜಗ್ಗುವುದಿಲ್ಲ ಎಂದರು.