ವಿ.ಎಸ್ ಉಗ್ರಪ್ಪ 
ರಾಜಕೀಯ

ಬಿಜೆಪಿ, ಜೆಡಿಎಸ್ ನವರಿಗೆ ದೆವ್ವ ಹಿಡಿದಿದೆ: ಉಗ್ರಪ್ಪ ವ್ಯಂಗ್ಯ

ಬೆಳಗಾವಿ ಅಧಿವೇಶನ ಬಂದ ತಕ್ಷಣ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಅದೇನೋ ದೆವ್ವ ದೇವರು ಮೇಮೇಲೆ ಬಂದವರಂತೆ ಆಡುತ್ತಾರೆ ...

ಬೆಂಗಳೂರು: ಬೆಳಗಾವಿ ಅಧಿವೇಶನ ಬಂದ ತಕ್ಷಣ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಅದೇನೋ ದೆವ್ವ ದೇವರು ಮೇಮೇಲೆ ಬಂದವರಂತೆ ಆಡುತ್ತಾರೆ ಎಂದು ವಿಧಾನ ಪರಿಷತ್  ಸದಸ್ಯ ವಿ.ಎಸ್ ಉಗ್ರಪ್ಪ ವ್ಯಂಗ್ಯವಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು ಕೃಷಿ ಕುಟುಂಬದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ರೈತರ ಕಷ್ಟದ ಅರಿವಿದೆ.ಈ ಕಾರಣಕ್ಕಾಗಿ ಅವರು ಕೃಷಿಗೆ ಪ್ರಧಾನ ಆದ್ಯತೆ ನೀಡಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ, ಆದರೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮಾತ್ರ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಮಾತನಾಡುತ್ತಾರೆ. ರಾಗಿ ಭತ್ತ, ನವಣೆ ಹೆಸರು, ದಾಳಿಂಬೆ ಬೆಳೆಗಾರರ ಬಗ್ಗೆ ಯಾಕೆ ಹೋರಾಟ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದರು.

ಕ್ಷಮೆ ಕೇಳಲಿ:
ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತಿರುವ ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ  ತುರ್ತು ಪರಿಸ್ಥಿತಿ ಬಗ್ಗೆ ನೀಡಿರುವ ಹೇಳಿಕೆ ರಾಜಕೀಯ ಪ್ರೇರಿತ. ಈ ಸಂಬಂಧ ಅವರು ರಾಜ್ಯದ ಜನತೆಯ ಭೇಷರತ್ ಕ್ಷಮೆ ಕೇಳಬೇಕು. ಲಲಿತ್ ಮೋದಿ ಅವರಿಗೆ ನೆರವು  ನೀಡಿರುವ ಸುಷ್ಮಾ ಸ್ವರಾಜ್, ವಸುಂದರಾ ರಾಜೇ, ಮಕಲಿ ಪದವಿ ಪ್ರಮಾಣ ಪತ್ರ ಹಗರಣದಲ್ಲಿ ಭಾಗಿಯಾಗಿರುವ ಸ್ಮೃತಿ ಇರಾನಿ, ಮಹಾರಾಷ್ಟ್ರದ ಸಚಿವೆ ಪಂಕಜ ಮುಂಡೆ ರಾಜೀನಾಮೆ ನೀಡಬೇಕು ಎಂದು ಉಗ್ರಪ್ಪ ಆಗ್ರಹಿಸಿದರು.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!