ಎಚ್ ಡಿ ಕುಮಾರಸ್ವಾಮಿ, ಕೋಡಿಹಳ್ಳಿ ಚಂದ್ರಶೇಖರ್ ಮತ್ತಿತರರು. 
ರಾಜಕೀಯ

ಬೆಳಗಾವಿಯಲ್ಲಿ ಸರ್ಕಾರದ ವಿರುದ್ಧ ಎಚ್ ಡಿಕೆ ವಾಗ್ದಾಳಿ

ರೈತನ ಸರಣಿ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ...

ಬೆಳಗಾವಿ: ರೈತನ ಸರಣಿ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಪಾದಯಾತ್ರೆ ಮೂಲಕ ಬೆಳಗಾವಿಗೆ ತೆರಳಿ, ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, 2013-14ರಲ್ಲಿ ಸರ್ಕಾರ ರೈತರಿಗೆ ಸಹಾಯ ಧನ ಘೋಷಿಸಿತ್ತು. ಕಬ್ಬು ಬೆಳೆದ ರೈತರಿಗೆ ಸಹಾಯ ಧನ ಘೋಷಿಸಿದ ಸರ್ಕಾರ ಅದನ್ನು ನೀಡದೆ ಆಟವಾಡಿಸುತ್ತಿದೆ. ಸರ್ಕಾರದ ಈ ಧೋರಣೆಯಿಂದ ಮನನೊಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ವಿಷಾಧಿಸಿದ್ದಾರೆ.

ರೈತರ ಬಾಕಿ ಹಣ ನೀಡುವುದು ಮತ್ತು ರೈತರ ಸಾಲ ಮನ್ನಾ ಮಾಡುವ ತಾಕತ್ತು ಸರ್ಕಾರಕ್ಕಿಲ್ಲ. ಈ ಹಿನ್ನಲೆಯಲ್ಲಿ ಪ್ರತಿನಿತ್ಯ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರೈತರ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ. ರೈತರು ಎಷ್ಟೇ ಪ್ರತಿಭಟನೆ, ಹೋರಾಟ ಮಾಡಿದರು ಸರ್ಕಾರ ಮಾತ್ರ ಸ್ಪಂದಿಸುತ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ರೈತರ ಸರಣಿ ಸಾವು ತಡೆಯಬೇಕೆಂಬುದು ನನ್ನಾಸೆ. ಆದ್ದರಿಂದ ನಾನು ರೈತರ ಸಮಸ್ಯೆ ಆಲಿಸಲು ಪಾದಯಾತ್ರೆ ನಡೆಸಿದೆ. ಪಾದಯಾತ್ರೆ ಮೂಲಕ ರೈತರ ಅನೇಕ ಸಮಸ್ಯೆಗಳ ಬಗ್ಗೆ ತಿಳಿದುಕೊಂಡೆ. ನಾನು ಪಾದಯಾತ್ರೆ ನಡೆಸುವುದರ ಬಗ್ಗೆ ಹಿತೈಷಿಗಳು ಆತಂಕ ವ್ಯಕ್ತಪಿಡಿಸಿದ್ದರು. ಆದರೆ, ರೈತರ ಜೀವಕ್ಕಿಂತ ನನ್ನ ಆರೋಗ್ಯ ನನಗೆ ಮುಖ್ಯವಲ್ಲ ಎಂದ ಅವರು 1 ತಿಂಗಳಲ್ಲಿ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂಧಿಸಬೇಕು. ಈ ವಿಚಾರವಾಗಿ ಸರ್ಕಾರಕ್ಕೆ ಹಕ್ಕೋತ್ತಾಯ ಮಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ