ರೋಷನ್ ಬೇಗ್ 
ರಾಜಕೀಯ

ಟಿಪ್ಪು ಹುತಾತ್ಮ ದಿನಕ್ಕೆ ರಜೆ

ಟಿಪ್ಪು ಸುಲ್ತಾನ್ ಹುತಾತ್ಮ ದಿನವಾದ ಮೇ 4ರಂದು ರಾಜ್ಯ ಸರ್ಕಾರ ರಜೆ ಘೋಷಿಸುವ ಕುರಿತು ಮುಖ್ಯಮಂತ್ರಿ ಸಕಾರಾತ್ಮಕವಾಗಿ...

ಬೆಂಗಳೂರು: ಟಿಪ್ಪು ಸುಲ್ತಾನ್ ಹುತಾತ್ಮ ದಿನವಾದ ಮೇ 4ರಂದು ರಾಜ್ಯ ಸರ್ಕಾರ ರಜೆ ಘೋಷಿಸುವ ಕುರಿತು ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ವಾರ್ತಾ ಸಚಿವ ರೋಷನ್ ಬೇಗ್ ಭರವಸೆ ನೀಡಿದ್ದಾರೆ. ಟಿಪ್ಪು ಸುಲ್ತಾನ್ ಹುತಾತ್ಮ ದಿನದಂದು ರಾಜ್ಯ ಸರ್ಕಾರ ರಜೆ ಸೇರಿ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಕೋರಿ ವೀರ ಕನ್ನಡಿಗ ಟಿಪ್ಪು ಸೇನೆ ಹಮ್ಮಿಕೊಂಡಿದ್ದ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶಕ್ಕಾಗಿ ತನ್ನ ಮಕ್ಕಳನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶ ಭಕ್ತ ಟಿಪ್ಪು ಸುಲ್ತಾನ್. ಅವರ ಹುತಾತ್ಮ ದಿನಾಚಾರಣೆ ರಾಜ್ಯ ಸರ್ಕಾರ ರಜೆ ಘೋಷಿಸಬೇಕೆಂಬ ಮನವಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ.
ಅವರು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ. ಅಲ್ಲದೇ ಈಗಾಗಲೇ ಟಿಪ್ಪು ಸುಲ್ತಾನ್ ಜನ್ಮ ದಿನಾಚಾರಣೆಯನ್ನು ಸರ್ಕಾರ ಆಚರಿಸುವ ಕುರಿತು ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ. ಈ ಕುರಿತು ಮುಂದಿನ ದಿನದಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ ಎಂದು ಹೇಳಿದರು. ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮಿ ಮಾತನಾಡಿ, ಟಿಪ್ಪು ಸುಲ್ತಾನ್ ಒರ್ವ ಆದರ್ಶ ಪುರುಷನಾಗಿದ್ದು, ಆತನ ಮೇಲಿನ ತಪ್ಪು ಕಲ್ಪನೆ ದೂರವಾಗಬೇಕು. ಸರ್ಕಾರ ಟಿಪ್ಪುವಿನ ಬಗ್ಗೆ ಜನರಿಗೆ ತಿಳಿಸುವ ಪ್ರಯತ್ನ ಮಾಡುವ ಮೂಲಕ ಮಾನವೀಯ  ಮೌಲ್ಯವನ್ನು ಜಗತ್ತಿಗೆ ಪರಿಚಯಿಸಬೇಕು ಎಂದು ಹೇಳಿದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್