ಹುಬ್ಬಳ್ಳಿ: ನಿದ್ರೆ ಮಾಡಲು ಅವಕಾಶ ಸಿಗುವುದಿಲ್ಲ ಎನ್ನುವ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಜತೆ ಚೀನಾ ಪ್ರವಾಸಕ್ಕೆ ಹೋಗಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚೀನಾದ ಜತೆಗೆ ಮಹತ್ವದ ಒಡಂಬಡಿಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಸಿಎಂ ಸಿದ್ದರಾಮಯ್ಯ ಅವರನ್ನು ಚೀನಾ ಪ್ರವಾಸಕ್ಕೆ ಆಹ್ವಾನಿಸಿದ್ದರು. ಆದರೆ ನಿದ್ರಾಭಂಗವಾಗುತ್ತದೆ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಪ್ರವಾಸಕ್ಕೆ ಹೋಗಿಲ್ಲ. ಇಂಥ ಆಲಸಿ ಮುಖ್ಯಮಂತ್ರಿಯನ್ನು ನಾನೆಂದೂ ನೋಡಿಲ್ಲ ಎಂದು ಹೇಳಿದರು