ವಿಜಯಪುರ: ಬಿಜೆಪಿ ಮುಕ್ತ ರಾಜ್ಯ ಮಾಡಲು ಸಿದ್ದರಾಮಯ್ಯನವರಿಗೆ ಸಾಧ್ಯವಿಲ್ಲ, ಅವರೇನಿದ್ರೂ ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡುತ್ತಾರೆ ಎಂದು ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಪೊಲೀಸರು ಭ್ರಷ್ಟರಾಗಿದ್ದಾರೆ ಎಂದು ದೂರಿದ್ದಾರೆ.
ಸಚಿವರು ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಸಾಮರಸ್ಯವಿಲ್ಲದಂತಾಗಿದೆ. ಅಲ್ಲದೇ ಕಾಂಗ್ರೆಸ್ ಸರ್ಕಾರದಲ್ಲಿ ಬಿಜೆಪಿ ಜಾರಿಗೊಳಿಸಿದ್ದ ಅಭಿವೃದ್ಧಿ ಕಾರ್ಯ ಕುಂಠಿತವಾಗಿವೆ ಎಂದ ಅವರು, ಸರ್ಕಾರ ಎಷ್ಟು ನಿರಾವರಿ ಯೋಜನೆ ಅನುಷ್ಠಾನ ಮಾಡಿದೆ? ಎಷ್ಟು ಯೋಜನೆಗಳಿಗೆ ಹೂಡಿಕೆ ಮಾಡಿದೆ ಮಾಹಿತಿ ನೀಡಲಿ ಎಂದು ಸವಾಲು ಹಾಕಿದರು.