ನವದೆಹಲಿ: ಬಿಹಾರ ಚುನಾವಣೆ ಫಲಿತಾಂಶದ ಬಗ್ಗೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಪ್ರತಿಕ್ರಿಯೆ ನೀಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದೊಂದು ಪಾಠ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗುತ್ತಿರುವುದು ಮೋದಿ ಅವರಿಗೆ ಪಾಠ ಕಲಿಸಿದಂತಾಗಿದೆ. ಈಗಲಾದರೂ ಮೋದಿ ತಪ್ಪನ್ನು ಸರಿಪಡಿಸಿಕೊಳ್ಳಬೇಕಿದೆ. ಬಿಹಾರ ಚುಣಾವಣೆ ಫಲಿತಾಂಶದಿಂದ ಬಿಜೆಪಿ ಯಾವ ರೀತಿಯ ರಾಜಕೀಯ ಮಾಡುತ್ತಿದೆ ಎಂಬುದು ಬಯಲಾಗಿದೆ ಎಂದು ಚಿದಂಬರಂ ಹೇಳಿದ್ದಾರೆ.
ಬಿಜೆಪಿ ಮಾದರಿಯ ರಾಜಕಾರಣವನ್ನು ಸುಲಭವಾಗಿ ಜಯಿಸಬಹುದು, ಅಪಾರ ಸಂಪನ್ಮೂಲಗಳನ್ನು ಹೊರತಾಗಿಯೂ ನಿತೀಶ್ ಕುಮಾರ್ ಬಿಜೆಪಿಯನ್ನು ಸೋಲಿಸಿದ್ದಾರೆ ಎಂದು ಚಿದಂಬರಂ ಹೇಳಿದ್ದಾರೆ.