ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಬೆಂಗಳೂರಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರನ್ನು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ. ಈ ಮೊದಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರು ಕೋಲಾರದ ಉಸ್ತುವಾರಿ ಸಚಿವರಾಗಿದ್ದರು.
ಇನ್ನು ಕೆ.ಜೆ ಜಾರ್ಜ್ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಮತ್ತು ಬೆಂಗಳೂರು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಕೊಡಗು ಜಿಲ್ಲಾ ಉಸ್ತುವಾರಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ನೀಡಲಾಗಿದೆ.