ವಿಧಾನಸಭೆ: ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಆರೋಪಿಗಳನ್ನು ಬಂಧಿಸಲಾಗದೆ ಸರ್ಕಾರ ಅಸಹಾಯಕವಾಗಿದೆ ಎಂದು ಪ್ರತಿಪಕ್ಷ ನಾಯಕ ಕೆ. ಎಸ್.ಈಶ್ವರಪ್ಪ ಹೇಳಿದ್ದಾರೆ.
ಅಧಿವೇಶನದ ಮೊದಲ ದಿನವಾದ ಸೋಮವಾರ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತಾ ದರೂ ಅದೇ ನೆಪದಲ್ಲಿ ಈಶ್ವರಪ್ಪ ಅವರು, ಕಲಬುರ್ಗಿ ವಿಚಾರ ಪ್ರಸ್ತಾಪಿಸಿ, ಸರ್ಕಾರವನ್ನು ಟೀಕಿಸಿದರು. ಕಲಾಪ ಆರಂಭವಾಗುತ್ತಿದ್ದಂತೆ ಅಗಲಿದ ಗಣ್ಯರಿಗೆ ಸಭಾಪತಿ ಡಿ.ಎಚ್.ಶಂಕರಮೂರ್ತಿ ಶ್ರದ್ಧಾಂಜಲಿ ಸಲ್ಲಿಸಿದರು. ಆಗ ಸಭಾನಾಯಕ ಎಸ್.ಆರ್ .ಪಾಟೀಲ್ ಮಾತನಾಡಿ, ಕಲಬುರ್ಗಿ ಹಂತಕರನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಆ ಮೂಲಕ ಕಠಿಣ ಸಂದೇಶ ರವಾನಿಸಲಾಗುತ್ತದೆ ಎಂದರು.
ಇದೇ ವೇಳೆ ಈಶ್ವರಪ್ಪ ಮಾತನಾಡಿ, ಕಲಬುರ್ಗಿ ಅವರ ಹತ್ಯೆಯಾಗಿ ಹಲವು ತಿಂಗಳೇ ಕಳೆದರೂ ಆರೋಪಿಗಳನ್ನು ಬಂಧಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದು ರಾಜ್ಯ ಸರ್ಕಾರದ ವೈಫಲ್ಯವೋ, ಇಲ್ಲವೋ ಗುಪ್ತಚರ ಇಲಾಖೆ ವಿಫಲವೋ ಎಂಬುದು ತಿಳಿಯುತ್ತಿಲ್ಲ. ಕಲಬುರ್ಗಿ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚಿಗೆ ಅನೇಕ ಬಣ್ಣಗಳನ್ನು ಹಚ್ಚಲಾಗುತ್ತಿದೆ. ಅದು ಅಸಹಿಷ್ಣುತೆಯಂತೆ. ಅನೇಕ ಮಂದಿ ಪ್ರಶಸ್ತಿಗಳನ್ನು ವಾಪಸ್ ನೀಡುತ್ತಿದ್ದಾರೆ. ಅವರೇನೂ ಕಲುಬುರ್ಗಿ ಹತ್ಯೆ ಆರೋಪಿಗಳನ್ನು ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದ್ದರಿಂದ ಪ್ರಶಸ್ತಿ ವಾಪಸ್ ನೀಡುತ್ತಿದ್ದಾರೋ ಅಥವಾ ಪ್ರಗತಿಪರ ಚಿಂತಕರೊಬ್ಬರ ಕೊಲೆ ಖಂಡಿಸಿ ಹಾಗೆ ಮಾಡುತ್ತಿದ್ದಾರೋ ತಿಳಿಯುತ್ತಿಲ್ಲ ಎಂದು ಹೇಳಿದರು.
ಕಲಬುರ್ಗಿ ಹತ್ಯೆ ಪ್ರಕರಣವನ್ನು ಗೃಹ ಸಚಿವ ಪರಮೇಶ್ವರ್ ಸವಾಲಾಗಿ ಸ್ವೀಕರಿಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು. ಇದಕ್ಕೂ ಮುನ್ನ ವಿಧಾನಸಭೆ ಸದಸ್ಯ ವೆಂಕಟೇಶ್ ನಾಯಕ್, ಮಾಜಿ ಸಚಿವ ಎಂ.ಮಹದೇವು, ಸಾಹಿತಿ ಕಯಾ್ಯರ ಕಿಂಜ್ಞಣ್ಣರೈ, ಚಿತ್ರನಿರ್ದೇಶಕ ಕೆ.ಎಸ್.ಎಲ್.ಸ್ವಾಮಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.