ಬೆಂಗಳೂರು: ಪ್ರಸಕ್ತ ಚಳಿಗಾಲ ಅಧಿವೇಶನದಲ್ಲಿ ರೈತರ ಆತ್ಮಹತ್ಯೆ ಮತ್ತು ಕಳಸಾ ಬಂಡೂರಿ ಯೋಜನೆ ಕುರಿತು ಸರ್ಕಾರದ ವಿರುದ್ಧ ಹೋರಾಟ ನಡೆಸಲು ಜೆಡಿಎಸ್ ತೀರ್ಮಾನಿಸಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್ .ಡಿ. ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಅಧಿವೇಶನದಲ್ಲಿ ಶಾಸಕರು ನಡೆಸಬೇಕಾದ ಹೋರಾಟ ಹಾಗೂ ಮುಂಬರುವ
ಪರಿಷತ್ ಚುನಾವಣೆ ಬಗ್ಗೆ ಕೂಲಂಕಷವಾಗಿ ಚರ್ಚಿಸಲಾಯಿತು. ಈ ಬಾರಿ ಅಧಿವೇಶನದಲ್ಲಿ ಪಕ್ಷದ ಶಾಸಕರು ರೈತರು ಮತ್ತು ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗಳ
ಬಗ್ಗೆ ಹೆಚ್ಚು ಆಸಕ್ತ ವಹಿಸಬೇಕು. ಒಂದು ವೇಳೆ ಟಿಪ್ಪು ಜಯಂತಿ ಮತ್ತು ಗೋಮಾಂಸದಂತಹ ಗಲಾಟೆಗಳು ಹೆಚ್ಚಾದರೆ ಅದಕ್ಕೆ ಪಕ್ಷದ ಶಾಸಕರು ಸೊಪ್ಪು ಹಾಕಬಾರದು ಎಂದು
ದೇವೇಗೌಡರು ಶಾಸಕರಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಎಲ್ಲಾ ಸ್ಥಾನಗಳಿಗೂ ಸ್ಪರ್ಧೆ : ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ 25 ಸ್ಥಾನಗಳಿಗೂ ಸ್ಪರ್ಧಿಸಲಿದ್ದು, ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಲೋಚನೆಯೇ ಇಲ್ಲ ಎಂದು ಶಾಸಕ ಜಮೀರ್ ಅಹಮ್ಮ ದ್‍ಖಾನ್ ಹೇಳಿದ್ದಾರೆ. ಸಭೆಯಲ್ಲಿ ಪಕ್ಷದ ಮುಂದಿನ ಹೋರಾಟಗಳು ಹಾಗೂ ಮುಂಬರುವ ಚುನಾವಣೆಗಳ ಬಗ್ಗೆ ವಿವರವಾಗಿ ಚರ್ಚಿಸಲಾಗಿದೆ. ಪಕ್ಷದ ನಾಯಕರು ಎಲ್ಲಾ ಶಾಸಕರಿಗೂ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಅದರಂತೆ ಮುಂದಿನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಎಲ್ಲಾ ಸ್ಥಾನಗಳಿಗೂ ಸ್ಪರ್ಧಿಸಲು ತೀರ್ಮಾನಿಸಿದೆ. ಮೈತ್ರಿ ಬಗ್ಗೆ ಈ ತನಕ ಯಾವುದೇ ಚಿಂತನೆ ನಡೆದಿಲ್ಲ ಎಂದು ಪ್ರತಿಕ್ರಿಯಿಸಿದರು. ಅಸಮಾಧಾನಗೊಂಡಿದ್ದ ಶಾಸಕರಾದ ಇಕ್ಬಾಲ್ ಅನ್ಸಾರಿ, ಎಚ್.ಸಿ. ಬಾಲಕೃಷ್ಣ, ಸಭೆಯಲ್ಲಿ ಕೊನೆಯ ಸಾಲಿನಲ್ಲಿ ಕುಳಿತು ಗಮನ ಸೆಳೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics