ಕಾಗೋಡು ತಿಮ್ಮಪ್ಪ 
ರಾಜಕೀಯ

ಕಲಾಪಕ್ಕೆ ಸಚಿವರ ಗೈರು, ಸ್ಪೀಕರ್ ಗರಂ

ಚಳಿಗಾಲದ ಅಧಿವೇಶನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿರಬೇಕಾದರೆ, ಕಲಾಪಕ್ಕೆ ಗೈರು ಆದ ಸಚಿವರನ್ನು ಸ್ಪೀಕರ್ ಕಾಗೋಡು...

ಬೆಂಗಳೂರು: ಚಳಿಗಾಲದ ಅಧಿವೇಶನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿರಬೇಕಾದರೆ, ಕಲಾಪಕ್ಕೆ ಗೈರು ಆದ ಸಚಿವರನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಗುರುವಾರ ನಡೆಯಿತು.

ಪ್ರತಿಪಕ್ಷಗಳ ಸದಸ್ಯರು ಸದನದಲ್ಲಿ ಸಚಿವರ ಗೈರು ಹಾಜರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ದಾದ ನಡೆಯಿತು. ಇದರಿಂದ ಆಕ್ರೋಶಗೊಂಡ ಸ್ಪೀಕರ್, ಇದೇನು ತಮಾಷೆಯ ಆಟ ಅಂದುಕೊಂಡಿದ್ದೀರಾ? ನಾನು ಈ ವಯಸ್ಸಿನಲ್ಲೂ ಸಕಾಲಕ್ಕೆ ಆಗಮಿಸಿ, ದಿನಪೂರ್ತಿ ಕಲಾಪದಲ್ಲಿ ಕೂರುತ್ತೇನೆ. ನಿಮಗೇನು ಸಮಸ್ಯೆ ಎಂದು ತರಾಟೆಗೆ ತೆಗೆದುಕೊಂಡರು.

ಇಂದು ಕಲಾಪ ಆರಂಭವಾದ ಕೂಡಲೇ ಪ್ರಶ್ನೋತ್ತರಗಳನ್ನು ಕೈಗೆತ್ತಿಕೊಳ್ಳಲು ಸ್ಪೀಕರ್ ಮುಂದಾದರು. ಆದರೆ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಸಚಿವರೇ ಇಲ್ಲದಿರುವುದರ ಬಗ್ಗೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಹರಿಹಾಯ್ದರು.

ಶಾಸಕರಾದ ಶಶಿಕಲಾ ಜೊಲ್ಲೆ, ಎನ್.ಎ.ಹ್ಯಾರೀಸ್ ಹಾಗೂ ಮಾನಪ್ಪ ವಜ್ಜಲ್ ಅವರ ಪ್ರಶ್ನೆಗಳಿಗೆ ಆರೋಗ್ಯ ಸಚಿವ ಯು.ಟಿ.ಖಾದರ್, ಬಿಜೆಪಿಯ ಅಶ್ವತ್ಥ್ ನಾರಾಯಣ್ ಅವರ ಪ್ರಶ್ನೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ಉತ್ತರಿಸಬೇಕಾಗಿತ್ತು. ಈ ಇಬ್ಬರೂ ಸದನಕ್ಕೆ ಗೈರು ಆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT