ಚಿಕ್ಕಮಗಳೂರು: ಹೆಚ್ಚುತ್ತಿರುವ ಅಸಹಿಷ್ಣುತೆಗೆ, ಆರ್ ಎಸ್ ಎಸ್ ಕಾರಣವೇ ಹೊರತು ಪ್ರಧಾನಿ ನರೇಂದ್ರ ಮೋದಿ ಅಲ್ಲ ಎಂದು ಮಾಜಿ ಪ್ರಧಾನಿ, ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ದೇಶದಲ್ಲಿನ ಅಸಹಿಷ್ಣುತೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಎನ್ ಡಿಎ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತವನ್ನು ಆರ್ ಎಸ್ ಎಸ್ ನಿಯಂತ್ರಿಸುತ್ತದೆ. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿಯೂ ಆರ್ ಎಸ್ ಎಸ್ ಆಡಳಿತವನ್ನು ನಿಯಂತ್ರಿಸುತ್ತಿತ್ತು ಎಂದು ಆರೋಪಿಸಿದ್ದಾರೆ.
ಶೃಂಗೇರಿ ಶ್ರೀಗಳಿಗೆ ಫೇಸ್ ಬುಕ್ ನಲ್ಲಿ ಅವಮಾನ ಮಾಡಿದ್ದು ಸರಿಯಲ್ಲ ಎಂದು ಹೇಳಿದ ದೇವೇಗೌಡರು ಈ ರೀತಿ ಅವಮಾನ ಮಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅಭಿಪ್ರಾಯ ಪಟ್ಟರು.